ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಮಾಣಿ: ಮಾಣಿ ಗ್ರಾಮಪಂಚಾಯತ್ ಕಟ್ಟಡದಲ್ಲಿ ಬಿಸಿರೋಡಿನ ಯುವವಕೀಲ ದೀಪಕ್ ಪೆರಾಜೆಯವರ ನೂತನ ಕಚೇರಿ ಮತ್ತು ಎಲ್ಲಾ ರೀತಿಯ ನಾಗರಿಕ ಸೇವಾ ಸೌಲಭ್ಯಗಳನ್ನು ಒದಗಿಸಲು ಶ್ರೀ ಲಲಿತೆ ನಾಗರಿಕ ಸೇವಾ ಕೇಂದ್ರವು ಇತ್ತೀಚೆಗೆ ಉದ್ಘಾಟನೆಗೊಂಡಿತು.

ಹಲವಾರು ಬಂಧು ಮಿತ್ರರ ಸಮ್ಮುಖದಲ್ಲಿ ಹಿರಿಯ ನೋಟರಿ ವಕೀಲರಾದ ಪಿ. ಜಯರಾಮ್ ರೈ ದೀಪ ಬೆಳಗಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಇನ್ನೋರ್ವ ವಕೀಲರಾದ ಚಂದ್ರಶೇಖರ ಶೆಟ್ಟಿ ಎಮ್ , ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಾಲ ಎಂ.ಪೆರಾಜೆ, ಮಾಣಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾರಾಯಣಶೆಟ್ಟಿ ತೋಟ,ಸುದೀಪ್ ಕುಮಾರ್ ಶೆಟ್ಟಿ ಹಾಗೂ ಪ್ರಗತಿಪರ ಕೃಷಿಕರಾದ ಚಂದ್ರಹಾಸ ಶೆಟ್ಟಿ ಬುಡೋಳಿಗುತ್ತು, ನೇರಳಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕರಾದ ಪುಷ್ಪರಾಜ್ ಚೌಟ ಮಾಣಿ, ದಾಮೋದರ ಸುವರ್ಣ ಮತ್ತು ಲಲಿತಾ ದಾಮೋದರ ಸುವರ್ಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಗಮಿಸಿದ್ದ ಅತಿಥಿಗಳನ್ನು, ಬಂಧುಮಿತ್ರರನ್ನು ಸಂಸ್ಥೆಯ ಮಾಲೀಕರಾದ ದೀಪಕ್ ಪೆರಾಜೆ ಮತ್ತು ನಮಿತಾ ದೀಪಕ್ ಸ್ವಾಗತಿಸಿದರು. ಹರೀಶ್ ಮಂಜೊಟ್ಟಿ ನಿರ್ವಹಿಸಿದರು.

ಈ ಕಚೇರಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲಾ ನಾಗರಿಕ ಸೇವಾ ಸೌಲಭ್ಯಗಳಾದ ರೇಷನ್ ಕಾರ್ಡ್,ವೋಟರ್ ಐಡಿ,ಪಾನ್ ಕಾರ್ಡ್, ಪಾಸ್ ಪೋರ್ಟ್, ಇ – ಸ್ಟಾಂಪ್,ಜಮೀನು ದಾಖಲಾತಿಗಳು, ರಿಜಿಸ್ಟ್ರೇಷನ್,ದೃಢೀಕೃತ ನಕಲು,ಮದುವೆ ಸರ್ಟಿಫಿಕೇಟ್,ಕನ್ವರ್ಷನ್ ಹೀಗೆ ಎಲ್ಲಾ ರೀತಿಯ ಸೇವೆಗಳನ್ನು ನೀಡುವುದರ ಜೊತೆಗೆ ಜನರಿಗೆ ಎಲ್ಲಾ ರೀತಿಯ ಕಾನೂನು ಸಲಹೆಗಳನ್ನು ಪಡೆಯಬಹುದಾಗಿದೆ ಎಂದು ವಕೀಲ ದೀಪಕ್ ಪೆರಾಜೆ ತಿಳಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ