ಇನ್ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ನಲ್ಲಿಯೇ ಸಿಗಲಿದೆ ಮ್ಯಾರೇಜ್ ಸರ್ಟಿಫಿಕೇಟ್!

ಬೆಂಗಳೂರು : ಇನ್ಮುಂದಿನ ದಿನಗಳಲ್ಲಿ ಮದುವೆಯಾಗಿರೋ ಮಂದಿ ಮ್ಯಾರೇಜ್ ಸರ್ಟಿಫಿಕೇಟ್ ಗಾಗಿ ಅಲ್ಲೊಮ್ಮೆ ಇಲ್ಲೊಮ್ಮೆ ಅಲೆಯಬೇಕಾಗಿಲ್ಲ. ಇದೀಗ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂಬ ಖುಷಿಯ ವಿಚಾರವನ್ನು ತಿಳಿಸಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನು ನೀಡಲಾಗಿದೆ.

READ ALSO