ರಾಜ್ಯಾದ್ಯಂತ ಸಂತೆ ಮಾರುಕಟ್ಟೆ ಸಂಪೂರ್ಣ ಬಂದ್! ದಿನಸಿ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ 12 ಗಂಟೆ ವರೆಗೆ ಅವಕಾಶ! ತಳ್ಳುವ ಗಾಡಿಗಳಿಗೆ ಸಂಜೆ 6 ಗಂಟೆ ವರೆಗೂ ಅವಕಾಶ!

ಬೆಂಗಳೂರು: ಕೊರೊನಾ ಕರ್ಫ್ಯೂ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಮತ್ತೊಮ್ಮೆ ಪರಿಷ್ಕರಿಸಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ ಇರಲಿದ್ದು, ಅವುಗಳಿಗೆ ವಿನಾಯತಿ ನೀಡಿಲ್ಲ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ರಿಂದ 10 ರ ವರೆಗೆ ಮಾತ್ರ ರೈತರು ತಾವು ಬೆಳೆದ ಹಣ್ಣು ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ ನೀಡಿದ್ದರಿಂದ ಎಲ್ಲ ಉತ್ಪನ್ನ ಮಾರಾಟ ಮಾಡಲಾಗದೆ ರೈತರು ಸಮಸ್ಯೆಗೆ ಸಿಲುಕಿದ್ದು,   ಇದೀಗ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಹಣ್ಣು ತರಕಾರಿಗಳನ್ನು ತಳ್ಳುವ ಗಾಡಿಗಳ ಮೂಲಕ ಮಾರಾಟ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

READ ALSO