ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ, ಸಿರಿಗಳ ಜಾತ್ರೆ ಸಂಪನ್ನ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.5ರಂದು ಆರಂಭಗೊಂಡ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಗುರುವಾರ ಸಂಪನ್ನಗೊಂಡಿತು.

ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್‌ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆದವು.ಬುಧವಾರ ಬೆಳಿಗ್ಗೆ ಆಶ್ಲೇಷಬಲಿ, ಮಹಾಪೂಜೆ (ತುಲಾಭಾರ ಸೇವೆ), ಚೂರ್ಣೋತ್ಸವ, ದರ್ಶನ ಬಲಿ, ಬಟ್ಟಲುಕಾಣಿಕೆ, ಪ್ರಸಾದ ವಿತರಣೆ, ಪಲ್ಲಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಬಲಿಉತ್ಸವ, ಸಿರಿಗಳ ಜಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ ನಡೆಯಿತು.

ಸಾಂಸ್ಕೃತಿಕ ವೇದಿಕೆಯಲ್ಲಿ ಹಳೆಯಂಗಡಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಗೆಯೊಂದಿಗೆ ‘ನಾಗ ಸಂಜೀವನ’ಯಕ್ಷಗಾನ ಪ್ರದರ್ಶನಗೊಂಡಿತು. ಫೆ.9 ರಂದು ಸಂಪ್ರೋಕ್ಷಣೆ, ಮಂಗಳಾ ಪ್ರಸಾದ ವಿತರಣೆ ನಡೆಯಿತು.ಫೆ.6ರಂದು ತೋರಣ ಮುಹೂರ್ತ, ಧ್ವಜಾರೋಹಣ, ದೊಡ್ಡ ರಂಗಪೂಜೆ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ, ಕುಣಿತಾ ಭಜನೆ, ಅನ್ನಸಂತರ್ಪಣೆ ನಡೆಯಿತು.

ನಂತರ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಬೆದ್ರ ಪಿಂಗಾರ ಕಲಾವಿದರಿಂದ ‘ಭರಣಿ ಕೃತಿಕೆ’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.ಫೆ 7ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ರಾತ್ರಿ ಉತ್ಸವ ಬಲಿ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ, ಕುಣಿತ ಭಜನೆ ನಡೆಯಿತು.ಫೆ.8ರಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಕ್ಷೇತ್ರಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದರು.

ಶಾಸಕ ಹರೀಶ್‌ ಪೂಂಜ, ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌, ಜೀರ್ಣೋದ್ಧಾರ ಸಮಿತಿ ಮುಂಬೈ ಘಟಕದ ಅಧ್ಯಕ್ಷ ನಾರಾಯಣ ಸುವರ್ಣ ಕನರೊಟ್ಟು, ಮೊಕ್ತೇಸರರಾದ ರತ್ನಾಕರ ಬುಣ್ಣಾನ್‌, ಎಂ.ಎಸ್‌.ಪೂಜಾರಿ, ವಿಜಯಕುಮಾರ್ ಬಂಗ, ಎಂ.ಅಣ್ಣಪ್ಪ ಹೆಗ್ಡೆ, ಸುಜಯ ಹೆಗ್ಡೆ, ಸುರೇಂದ್ರ ಪೂಜಾರಿ ಮತ್ತಿತರರು ಇದ್ದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 169 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 286 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 193 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ