ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬದವರು ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ಮೂಗುತಿ ಮತ್ತು ರವಿಕೆ ಕಣ ವಿತರಿಸಿದರು.

ಸಂಜೆ 5 ಗಂಟೆಗೆ ವಧೂ-ವರರನ್ನು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನದ ಬಳಿಯಿಂದ ಅಮೃತವರ್ಷಿಣಿ ಸಭಾಭವನಕ್ಕೆ ಕರೆದುಕೊಂಡು ಹೋಗಲಾಯಿತು. ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿದರು.

ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದಘೋಷ, ಮಂಗಳವಾದ್ಯ, ಹಾರ ವಿನಿಮಯ, ಮಂತ್ರಾಕ್ಷತೆಯೊಂದಿಗೆ ವಧುವಿಗೆ ಮಂಗಳಸೂತ್ರ ಧಾರಣೆ ಮಾಡಲಾಯಿತು.

ಸುಶ್ರಾವ್ಯ ಶೋಭಾನೆ ಹಾಡಗಳೊಂದಿಗೆ ವಧೂ-ವರರಿಗೆ ಆರತಿ ಹಾಗೂ ಮಂಗಲದ್ರವ್ಯಗಳನ್ನು ವಿತರಣೆ ಮಾಡಲಾಯಿತು. ದಾಂಪತ್ಯ ದೀಕ್ಷೆಯ ಬಳಿಕ ನೂತನ ದಂಪತಿಗಳಿಗೆ ಧರ್ಮಸ್ಥಳದ ವತಿಯಿಂದ ಉಡುಗೊರೆ ನೀಡಿ ಶುಭ ಹಾರೈಸಲಾಯಿತು. ಬಳಿಕ ನೂತನ ದಂಪತಿಗಳು ದೇವರ ದರ್ಶನ ಮಾಡಿ, ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟದ ವ್ಯವಸ್ಥೆ ಏರ್ಪಡಿಸಲಾಗಿತ್ತು.

ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸದೊಂದಿಗೆ ಹೊಂದಾಣಿಕೆಯಿಂದ ಸಾರ್ಥಕ ಜೀವನ ನಡೆಸಬೇಕು: ಡಾ.ಹೆಗ್ಗಡೆ

ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನೂತನ ದಂಪತಿಗಳು ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸದೊಂದಿಗೆ ಹೊಂದಾಣಿಕೆಯಿಂದ ಸಾರ್ಥಕ ಜೀವನ ನಡೆಸಬೇಕು ಎಂದು ಸಲಹೆ ನೀಡಿ ಆಶೀರ್ವದಿಸಿದರು.
ಧರ್ಮಸ್ಥಳದಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಸರ್ಕಾರ ಹಾಗೂ ಇತರ ಮಠ-ಮಂದಿರಗಳು ಮಾದರಿಯಾಗಿ ಸ್ವೀಕರಿಸಿ ಅನುಸರಿಸುತ್ತಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಬೇರೆ ಕಡೆಗಳಲ್ಲಿ ನಡೆಸುವ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಇನ್ನು ಮುಂದೆ ಧರ್ಮಸ್ಥಳದಿಂದ ಮಂಗಳಸೂತ್ರ ಕೊಡಲಾಗುವುದಿಲ್ಲ ಎಂದು ಹೆಗ್ಗಡೆಯವರು ಪ್ರಕಟಿಸಿದರು. ಏಕೆಂದರೆ, ಹೀಗೆ ಕೊಟ್ಟರೆ ಬೇರೆ ಕಡೆಗಳಲ್ಲಿಯೂ ಧರ್ಮಸ್ಥಳದ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುತ್ತಾರೆ ಎಂಬ ತಪ್ಪು ಕಲ್ಪನೆ ಜನರಲ್ಲಿ ಮೂಡಿಬರುತ್ತದೆ. ಧರ್ಮಸ್ಥಳದಿಂದ ತಾಳಿ ಕೊಡುತ್ತಾರೆ ಎಂದಾಗ ಜನರು ಕ್ಷೇತ್ರಕ್ಕೆ ಬರುವ ಬದಲು ಅಲ್ಲೇ ಮದುವೆಯಾಗಲು ನಿರ್ಧರಿಸುತ್ತಾರೆ ಎಂದರು.

ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನಲ್ಲಿ ಬದಲಾವಣೆಯ ಪರ್ವ: ಕೆ.ಹರೀಶ್ ಕುಮಾರ್

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡಿ, ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನಲ್ಲಿ ಬದಲಾವಣೆಯ ಪರ್ವವಾಗಿದ್ದು ಧರ್ಮಸ್ಥಳದಿಂದ ನಡೆಸುವ ಬಹುಮುಖಿ ಸಮಾಜ ಸೇವಾ ಕಾರ್ಯಗಳಲ್ಲಿ ಉಚಿತ ಸಾಮೂಹಿಕ ವಿವಾಹ ಅತ್ಯಂತ ಪವಿತ್ರ ಹಾಗೂ ಪುಣ್ಯದಾಯಕ ಸೇವೆಯಾಗಿದೆ. ಸರ್ಕಾರ ಹಾಗೂ ಅನೇಕ ಮಠ-ಮಂದಿರಗಳು ಕೂಡಾ ಧರ್ಮಸ್ಥಳದ ಮಾದರಿ ಅನುಸರಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಪೂಜ್ಯ ಹೆಗ್ಗಡೆ ದಂಪತಿಯ ಸಾರ್ಥಕ ಬದುಕೇ ಎಲ್ಲರಿಗೂ ಪ್ರೇರಕ ಶಕ್ತಿ: ಹರೀಶ್ ಪೂಂಜಾ

ಶಾಸಕ ಹರೀಶ್ ಪೂಂಜ ಮಾತನಾಡಿ, ಪೂಜ್ಯ ಹೆಗ್ಗಡೆ ದಂಪತಿಯ ಸಾರ್ಥಕ ಬದುಕೇ ಎಲ್ಲರಿಗೂ ಪ್ರೇರಕ ಶಕ್ತಿ ಹಾಗೂ ಮಾರ್ಗದರ್ಶಿಯಾಗಿದೆ ಎಂದು ಹೇಳಿ ನೂತನ ದಂಪತಿಗಳಿಗೆ ಶುಭ ಹಾರೈಸಿದರು.

ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಶರ್ಮಿಳಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಂಗಳೂರಿನಲ್ಲಿರುವ ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಸ್ವಾಗತಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಧನ್ಯವಾದವಿತ್ತರು. ಸಂಪತ್ ಕುಮಾರ್ ರೈ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ