ಮೇ-ಜೂನ್ ತಿಂಗಳಲ್ಲಿ ನಡೆಯಲಿದೆ ಪಿಯುಸಿ-ಎಸ್ಎಸ್ಎಲ್ ಸಿ ಪರೀಕ್ಷೆ! : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನಾ ವೈರಸ್ ಹರಡುವಿಕೆಯ ಭೀತಿಯಿಂದ ರಾಜ್ಯಾದ್ಯಂತ ಶಾಲೆ-ಕಾಲೇಜುಗಳು ಸರಿಯಾದ ಸಮಯದಲ್ಲಿ ಪುನರಾರಂಭವಾಗದೆ ಇದ್ದ ಕಾರಣ ಈ ವರ್ಷದ PUC ಹಾಗೂ SSLC ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿ ಪರೀಕ್ಷಾ ದಿನವನ್ನು ನಿಗಧಿಗೊಳಿಸಲಾಗಿದೆ.

ಇದರಂತೆ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಒಂದರಿಂದ ಒಂಬತ್ತನೇ ತರಗತಿಗೆ ಪಠ್ಯ ಕಡಿತವಿಲ್ಲ:

ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 22 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 46 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 96 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ