ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪ – 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ, ಗಗನಚುಂಬಿ ಕಟ್ಟಡಗಳು ನೆಲಸಮ!

ನೈಪಿಡಾವ್/ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿಂದು ಸಂಭವಿಸಿದ ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇಂದು ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಾಗಯಿಂಗ್ ನಗರದ ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ತಕ್ಷಣಕ್ಕೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ. ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್ ಬ್ಯಾಂಕಾಕ್‌ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್‌ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.ಬ್ಯಾಂಕಾಕ್‌ನಲ್ಲಿ ಭೂಕಂಪದ ಅನುಭವವಾದ ನಂತರ ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಟ್ಯಾಂಕ್‌ನಿಂದ ನೀರು ಕೆಳಗೆ ಬೀಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಜೊತೆಗೆ ಸ್ವಿಮ್ಮಿಂಗ್ ಪೂಲ್‌ನಲ್ಲಿರುವ ನೀರು ಚಿಮ್ಮಿ ಹೊರ ಚೆಲ್ಲುತ್ತಿದೆ. ಹೋಟೆಲ್‌ನಲ್ಲಿ ವಸ್ತುಗಳೆಲ್ಲ ಅಲುಗಾಡುತ್ತಿರುವ ದೃಶ್ಯಗಳನ್ನು ಅಲ್ಲಿನ ಜನ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ