ಚಾರ್ಮಾಡಿ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮೊಟಕುಗೊಂಡ ಕಾಮಗಾರಿ‌ ಮುನ್ನಡೆಸಲು ಒಪ್ಪಿಗೆ ಸೂಚಿಸಿದ MCK

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ಬೆನ್ನಲ್ಲೇ ಶ್ರೀಘ್ರದಲ್ಲೇ ಗುಣಮಟ್ಟದ ರಸ್ತೆ ಕಾಮಗಾರಿ ಪುನರ್ ಪ್ರಾರಂಭ ಮಾಡಲು ಮುಗೆರೋಡಿ ಕನ್ ಸ್ಟ್ರಕ್ಷನ್ (MCK) ಒಪ್ಪಿಗೆ ಸೂಚಿಸಿದ್ದು ಇಂದು ನಡೆದ ಒಡಂಬಡಿಕೆ ಸಭೆಯಲ್ಲಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು ಇನ್ನೂ ಮುಂದಿನ ಎಲ್ಲಾ ಕೆಲಸ ಕಾರ್ಯಗಳನ್ನು ಮುಗೆರೋಡಿ ಕನ್ ಸ್ಟ್ರಕ್ಷನ್ ರವರು ಡಿಪಿ ಜೈನ್ ಪಡೆದಿರುವ ಈ ಟೆಂಡರನ್ನು ಪೂರ್ಣಗೊಳಿಸುವ ಒಪ್ಪಿಕೊಂಡಿದ್ದಾರೆ.

ಈಗಾಗಲೇ ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದ ಕೆಲವೆಡೆ ವಾಹನ ಸಂಚಾರಕ್ಕೆ ತೊಡಕಾಗಿರುವ ರಸ್ತೆಗಳ ದುರಸ್ತಿಯನ್ನು ಇದೇ ಸೋಮವಾರದಿಂದ ಮಾಡುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು ಡಿ.ಪಿ.ಜೈನ್ ಕನ್‌ಸ್ಟ್ರಕ್ಸನ್ ಗುತ್ತಿಗೆಯನ್ನು ಪಡೆದುಕೊಂಡು ಕಾಮಗಾರಿಯನ್ನು ಪ್ರಾರಂಭಿಸಿದರೂ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ವಾಹನಗಳು ಸಂಚಾರ ಮಾಡದಂತಹ ಸ್ಥಿತಿದ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಅಲ್ಲಲ್ಲಿ ಸಾಕಷ್ಟು ಬಾರಿ ಪ್ರತಿಭಟನೆಗಳನ್ನು ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆಯೂ ನಡೆದಿತ್ತು.ಇತ್ತೀಚಿನ ಬೆಳವಣಿಗೆಯಲ್ಲಿ ಡಿ.ಪಿ. ಜೈನ್ ಕಂಪನಿಯ ಕಾರ್ಮಿಕರು ಸಂಬಳ ನೀಡಿಲ್ಲ ಎಂಬ ಕಾರಣಕ್ಕೆ ಪ್ರತಿಭಟನೆಯನ್ನು ಮಾಡುತ್ತಿರುವ ಕಾರಣ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ರಸ್ತೆಯ ಮುಂದಿನ ಕಾಮಗಾರಿಯ ಜವಾಬ್ದಾರಿಯನ್ನು ಮೊಗ್ರೋಡಿ ಕನ್ ಸ್ಟ್ರಕ್ಷನ್(MCK)ಗೆ ನೀಡುವ ಕುರಿತು ಬೆಂಗಳೂರಿನಲ್ಲಿ ಡಿ.ಪಿ.ಜೈನ್ ಕಂಪೆನಿಯ ಮಾಲೀಕರು, ಮೊಗ್ರೋಡಿ ಕನ್ ಸ್ಟ್ರಕ್ಷನ್ ಮಾಲೀಕರು, ಬೆಳ್ತಂಗಡಿ ಶಾಸಕರು, ಸಚಿವರ ನೇತೃತ್ವದಲ್ಲಿ ಮಾತುಕತೆ ನಡೆಸಲಾಗಿದೆ.ಕಳೆದ ಕೆಲವು ಸಮಯಗಳಿಂದ ಈ ರಸ್ತೆಯ ಕಾಮಗಾರಿಯ ಗುತ್ತಿಗೆ ಪಡೆದಿದ್ದ ಡಿ.ಪಿ. ಜೈನ್ ಅವರು ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಿರ್ವಹಿಸಿದ ಪರಿಣಾಮ ಮಳೆ ಪ್ರಾರಂಭದ ನಂತರ ಈ ರಸ್ತೆ ಹೊಂಡ ಗುಂಡಿಗಳಿಂದ ವಾಹನ ಸಂಚಾರ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಅದಲ್ಲದೇ ಕಂಪನಿ ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂಬ ಕಾರಣವೊಡ್ಡಿ ಕಂಪನಿ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸಿ ಕೆಲಸ ಸ್ಥಗಿತಗೊಳಿಸಿದ್ದರು. ಇದರಿಂದ ಕಾಮಗಾರಿ ನಿರ್ವಹಿಸಲು ಕಾರ್ಮಿಕರ ಕೊರತೆಯಿಂದ ಕಳೆದ ಕೆಲವು ದಿನಗಳಿಂದ ಕೆಲಸ ಸ್ಥಗಿತಗೊಂಡಿತ್ತು. ಇದೀಗ ಮುಗೆರೋಡಿ ಕನ್ ಸ್ಟ್ರಕ್ಷನ್ ಕಾಮಗಾರಿ ಪ್ರಾರಂಭಗೊಳಿಸಲು ಮುಂದೆ ಬಂದಿರುವುದು ನಿತ್ಯ ಪ್ರಯಾಣಿಕರಿಗೆ ಶುಭಸುದ್ದಿಯಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ