ಪ್ರಸಿದ್ಧ MDH ಮಸಾಲ ಪುಡಿಗಳ ಉತ್ಪಾದನಾ ಸಂಸ್ಥೆಮಾಲೀಕ ಧರ್ಮಪಾಲ ಗುಲಾಟಿ ವಿಧಿವಶ

ನವದೆಹಲಿ: ಮಸಾಲಾ ಪುಡಿಗಳ ಉತ್ಪಾದನಾ ಸಂಸ್ಥೆ ಎಂಡಿಎಚ್​ನ ಮಾಲೀಕ ಧರ್ಮಪಾಲ ಗುಲಾಟಿ ಇಂದು ಮುಂಜಾನೆ 5.30ರ ವೇಳೆಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕಳೆದ ಮೂರುವಾರಗಳಿಂದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಸಿಯಾಲ್ ಕೋಟ್​ನಲ್ಲಿ 1923ರಲ್ಲಿ ಜನಿಸಿದ ಧರ್ಮಪಾಲ ಗುಲಾಟಿ ಅವರು ಆಪ್ತವಲಯದಲ್ಲಿ ದಾಲಾಜಿ, ಮಹಾಶಯಾಜಿ ಎಂದೇ ಕರೆಯಿಸಿಕೊಳ್ಳುತ್ತಿದ್ದವರು. ಬಾಲ್ಯದಲ್ಲೇ ಶಾಲೆ ಬಿಟ್ಟ ಅವರು ತಂದೆ ಆರಂಭಿಸಿದ ಮಸಾಲಾ ವ್ಯಾಪಾರಕ್ಕೆ ಜತೆಗೂಡಿದ್ದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಅವರು ಭಾರತಕ್ಕೆ ಆಗಮಿಸಿ ಅಮೃತಸರದಲ್ಲಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು.

ನಂತರ ದೆಹಲಿಗೆ ಆಗಮಿಸಿ ಕರೋಲ್ ಬಾಗ್​ನಲ್ಲಿ ಅಂಗಡಿಯೊಂದನ್ನು ತೆರೆದರು. ಅಧಿಕೃತವಾಗಿ ಕಂಪನಿಯನ್ನು ಆರಂಭಿಸಿದ್ದು 1959ರಲ್ಲಿ. ಮಸಾಲಾ ವ್ಯಾಪಾರವನ್ನು ಉದ್ಯಮ ಸ್ವರೂಪಕ್ಕೆ ತಂದ ಅವರು, ಎಂಡಿಎಚ್ ಮಸಾಲಾವನ್ನು ಜಗತ್ತಿಗೇ ಪರಿಚಯಿಸಿದರು. ಕಳೆದ ವರ್ಷ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಎಂಡಿಎಚ್​ ಮಸಾಲಾ ಕಂಪನಿ ಹೇಳುವ ಪ್ರಕಾರ, ಗುಲಾಟಿ ತಮ್ಮ ವೇತನದ ಶೇಕಡ 90 ಪಾಲನ್ನು ದೇಣಿಗೆ ನೀಡಿದ್ದಾರೆ. 

ಗುಲಾಟಿ ಅವರನ್ನು “ಕಿಂಗ್ ಆಫ್ ಸ್ಪೈಸ್” ಎಂದೇ ಕರೆಯಲಾಗುತ್ತಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯ ಮಾತಾ ಚನ್ನನ್ ದೇವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹಾಶಯ್ ಎಂಬ ಹೆಸರಿನಿಂದ ಜನಪ್ರಿಯರಾಗಿರುವ ಎಂಡಿಎಚ್ ಮಾಲೀಕ ಧರ್ಮಪಾಲ್ ಅವರು ಎಂಡಿಎಚ್ ಮಸಾಲ ಕಂಪನಿ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಅಜ್ಜ ಎಂದೇ ಗುರುತಿಸಲ್ಪಡುತ್ತಿದ್ದರು.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು