ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

ಶೃಂಗೇರಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಟಿವಿ ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು ಇದೀಗ ಇದನ್ನು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ‘ಯಥಾಸ್ಥಿತಿ’ (Status Quo) ಕಾಯ್ದುಕೊಳ್ಳುವಂತೆ ಸೂಚಿಸಿದೆ.

ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ರಾಜೇಗೌಡರ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಪ್ರಬಲವಾದ ಮಂಡಿಸಿದರು. ಚುನಾವಣಾ ಆಯೋಗದ ನಡವಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಮರುಎಣಿಕೆಯ ಸಂದರ್ಭದಲ್ಲಿ ಪಾರದರ್ಶಕತೆ ಇರಲಿಲ್ಲ ಎಂದು ವಾದಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.

ಇದರಿಂದ ಟಿ ಡಿ ರಾಜೇಗೌಡ ಅವರು ಶಾಸಕರಾಗಿ ಮುಂದುವರೆಯಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್‌ ಅವರು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ಇತ್ತೀಚೆಗಷ್ಟೇ ಅಂಚೆ ಮತಗಳ ಮರುಎಣಿಕೆಯಲ್ಲಿ ಜಯಗಳಿಸಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಡಿ.ಎನ್. ಜೀವರಾಜ್ ಅವರಿಗೆ ಇದು ಭಾರಿ ಹಿನ್ನಡೆಯಾಗಿದೆ.

ಮೇ 31ರಂದು ನಡೆಯಲಿರುವ ಮುಂದಿನ ವಿಚಾರಣೆಯು ಶೃಂಗೇರಿ ಕ್ಷೇತ್ರದ ಅಂತಿಮ ಶಾಸಕರು ಯಾರು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕವಾಗಲಿದೆ.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 75 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views