ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜುಗೌಡಗೆ ಟಿಕೆಟ್!

ಬೆಂಗಳೂರು : ಎಸ್.ಎಲ್ ಧರ್ಮೇಗೌಡ ನಿಧನದಿಂದ ತೆರವಾಗಿರುವ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜುಗೌಡಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮುನಿರತ್ನ ಅವರಿಗೆ ಟಿಕೆಟ್ ನೀಡಿದ್ದರಿಂದ ತುಳಸಿ ಮುನಿರಾಜು ಗೌಡ ಮುನಿಸಿಕೊಂಡಿದ್ದರು.

READ ALSO

ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ 1 ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ತುಳಸಿ ಮುನಿರಾಜು ಗೌಡ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದೆ. ಬಹುತೇಕ ತುಳಸಿ ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.