
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್ ಕೆ, ಆರ್.ಶಂಕರ್, ಎಂಟಿಬಿ ನಾಗರಾಜು, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಬ್ಬರು ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಆದರೆ ಸೂಚಕರಿಲ್ಲದ ಕಾರಣ ಇವರ ನಾಮಪತ್ರ ತಿರಸ್ಕೃತಗೊಂಡಿದೆ.
ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ ಕಣದಲ್ಲಿ ಉಳಿದಿದ್ದ ಮೂರು ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೊನೆ ಗಳಿಗೆವರೆಗೂ ಯಾರು ನಾಮ ಪತ್ರ ವಾಪಸ್ಸು ಪಡೆಯಲಿಲ್ಲ. ಜೂ.19ರಂದು ನಡೆದ ನಾಮಪತ್ರಗಳ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ನಾಮ ಪತ್ರಗಳು ತಿರಸ್ಕøತಗೊಂಡಿದ್ದವು.
ಹೀಗಾಗಿ ರಾಜ್ಯಸಭೆ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಅವಿರೋಧ ಆಯ್ಕೆಯಾಗಿದೆ.