ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್‌ ಗಳು ಸೇರಿದಂತೆ ಒಟ್ಟು 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು: ನಾಶೀರ್ ಹುಸೇನ್ (37), ಅಡ್ಯಾರ್ ಮಂಗಳೂರು. ಮಹಮ್ಮದ್ ಜುನೈದ್ (38), ಗೋಳ್ತಮಜಲು, ಬಂಟ್ವಾಳ. ಮೊಹಮ್ಮದ್ ಅಫ್ರೀದಿ (24), ಕಂಕನಾಡಿ ಮಂಗಳೂರು ಎಂಬವರಾಗಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 112/2026, ಕಲಂ: 8(C) ಜೊತೆಗೆ 22(ಸಿ) NARCOTIC DRUGS & PSYCHOTROPIC SUBSTANCES ACT, 1985 Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ ಕೆ.ವಿ, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ರನ್ನ ಗೌಡ ಎಸ್‌ ಪಾಟೀಲ್, ಹಾಗೂ ಪ್ರೊ. ಪಿ.ಎಸ್‌.ಐ ರವರಾದ ಶಿವರಾಮ್‌, ಫಕೀರಪ್ಪ ಮತ್ತು ಸಿಬ್ಬಂದಿಯವರಾದ ಉದಯ ರೈ, ರಾಧಾಕೃಷ್ಣ ಕೆ , ಪ್ರವೀಣ್‌ ರೈ, ಪ್ರಶಾಂತ್, ಲೋಕೇಶ್‌, ವಿವೇಕ್ ರೈ, ಕುಮಾರ್, ಬಸವರಾಜ್‌, ಶ್ರೀಧರ್‌, ಧನ್ಯಶ್ರೀ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ರವರು ಕಾರ್ಯಾಚರಣೆಗೆ ಸಹಕರಿಸಿರುತ್ತಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ