ಐಷಾರಾಮಿ ಕಾರಿನಲ್ಲಿ ಬಂದು ಸ್ವಚ್ಚಂದವಾಗಿದ ನೇತ್ರಾವತಿ ಒಡಲಿಗೆ ತ್ಯಾಜ್ಯ ಎಸೆದರು! ಕೊನೆಗೂ ಕಸದ ಕಾರು ತಲುಪುವ ಜಾಗಕ್ಕೆ ತಲುಪಿ ಬಿಟ್ಟಿತ್ತು!

ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ.

ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ.

ಇಲ್ಲೊಂದು ಕಾರಿನಲ್ಲಿ ಬಂದ ಸುಶಿಕ್ಷಿತರಂತೆ ಕಾಣುವ ವಿಕೃತ ಮನಸಿನ ಮಹಿಳೆಯರಿಬ್ಬರು ಕಸ ಎಸೆಯುವ ದೃಶ್ಯಗಳನ್ನು ಸೆರೆ ಹಿಡಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡುವಲ್ಲಿ ಪ್ರಜ್ಞಾವಂತರ ತಂಡ ಯಶಸ್ವಿಯಾಗಿದೆ.

ಈ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾಲತಾಣದಲ್ಲಿ “ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಸ್ಲೋಗನ್‌ ಮೂಲಕ ಅಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು ನೋಂದಾಯಿತ ಕೆಂಪು ಕಾರಿನಲ್ಲಿ ಬಂದಿದ್ದ ಇಬ್ಬರು ಮಹಿಳೆಯರು ತ್ಯಾಜ್ಯವನ್ನೊಳಗೊಂಡ ಪ್ಲಾಸ್ಟಿಕ್‌ ಚೀಲವನ್ನು ತಂತಿ ಬೇಲಿ ಮೇಲಿನಿಂದ ನದಿಗೆ ಎಸೆಯುವ 15 ಸೆಕೆಂಡ್‌ಗಳ ದೃಶ್ಯ ಇದೀಗ ವೈರಲ್‌ ಆಗಿದ್ದು

ಇದೀಗ ನದಿಗೆ ಕಸವನ್ನು ಎಸೆದ ಬೆಂಗಳೂರು ಮೂಲದ ವಾಹನವನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

KA 03 NB 4648 Registration ಕಾರಿನಲ್ಲಿ ಬಂದು ಈ ಕೃತ್ಯ ಎಸಗಿರುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ,ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 86 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 49 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 53 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 136 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 75 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 86 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ