ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ.
ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ.
ಇಲ್ಲೊಂದು ಕಾರಿನಲ್ಲಿ ಬಂದ ಸುಶಿಕ್ಷಿತರಂತೆ ಕಾಣುವ ವಿಕೃತ ಮನಸಿನ ಮಹಿಳೆಯರಿಬ್ಬರು ಕಸ ಎಸೆಯುವ ದೃಶ್ಯಗಳನ್ನು ಸೆರೆ ಹಿಡಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡುವಲ್ಲಿ ಪ್ರಜ್ಞಾವಂತರ ತಂಡ ಯಶಸ್ವಿಯಾಗಿದೆ.
ಈ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾಲತಾಣದಲ್ಲಿ “ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಸ್ಲೋಗನ್ ಮೂಲಕ ಅಕ್ರೋಶ ವ್ಯಕ್ತವಾಗುತ್ತಿದೆ.
ಬೆಂಗಳೂರು ನೋಂದಾಯಿತ ಕೆಂಪು ಕಾರಿನಲ್ಲಿ ಬಂದಿದ್ದ ಇಬ್ಬರು ಮಹಿಳೆಯರು ತ್ಯಾಜ್ಯವನ್ನೊಳಗೊಂಡ ಪ್ಲಾಸ್ಟಿಕ್ ಚೀಲವನ್ನು ತಂತಿ ಬೇಲಿ ಮೇಲಿನಿಂದ ನದಿಗೆ ಎಸೆಯುವ 15 ಸೆಕೆಂಡ್‌ಗಳ ದೃಶ್ಯ ಇದೀಗ ವೈರಲ್ ಆಗಿದ್ದು
ಇದೀಗ ನದಿಗೆ ಕಸವನ್ನು ಎಸೆದ ಬೆಂಗಳೂರು ಮೂಲದ ವಾಹನವನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
KA 03 NB 4648 Registration ಕಾರಿನಲ್ಲಿ ಬಂದು ಈ ಕೃತ್ಯ ಎಸಗಿರುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ,ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.