ಬೆಂಗಳೂರು: ಕರ್ನಾಟಕ ಸರ್ಕಾರದ 2020-21ನೇ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಕಾಟಿಪಳ್ಳ ಕು.ದೀಕ್ಷಾ ಎಂ ಶೆಟ್ಟಿ ಭಾಜನರಾಗಿದ್ದಾರೆ.
ಬಹುಮುಖ ಪ್ರತಿಭೆ, ಯಕ್ಷಗಾನ, ಪೂಜಾ ಕುಣಿತ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸಿರುವ ಕು.ದೀಕ್ಷಾ ಎಂ ಶೆಟ್ಟಿ ಇವರು ಶ್ರೀ.ಮಾಧವ ಎಸ್ ಶೆಟ್ಟಿ ಬಾಳ,ಯಕ್ಷವೈಭವ ಕಾಟಿಪಳ್ಳ ಹಾಗೂ ಶ್ರೀಮತಿ ಮೀರಾವಾಣಿ ಎಂ ಶೆಟ್ಟಿ ಜಪ್ಪುಗುಡ್ಡೆ ಗುತ್ತು ಇವರ ಸುಪುತ್ರಿಯಾಗಿರುತ್ತಾರೆ.
ದಿನಾಂಕ 10/03/2021ನೇ ಬುಧವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯ್ಯೂರಪ್ಪ, ಸಚಿವ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.