ಮಂಗಳೂರು ಮರವೂರಿನಲ್ಲಿ ಸೇತುವೆ ಕುಸಿತ! ಮಂಗಳೂರು- ಏರ್‌ಪೋರ್ಟ್ ರಸ್ತೆ ಬಂದ್!

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮರವೂರು ಸೇತುವೆ ಮಂಗಳವಾರ (ಇಂದು) ಮುಂಜಾನೆ ಸುಮಾರು ಮೂರು ಗಂಟೆಗೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ.

ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಕರಾವಳಿಯಲ್ಲಿ ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮೇಲಿನ‌ ಡ್ಯಾಮ್‌ನಿಂದ ಒಂದೇ ಮಗ್ಗುಲಲ್ಲಿ ನೀರು ಹರಿದು ಬರುತ್ತಿತ್ತು.

ಮಂಗಳೂರು ನಗರದಿಂದ ವಿಮಾನ ನಿಲ್ದಾಣ ಬಜಪೆ, ಕಿನ್ನಿಗೋಳಿ, ಕಟೀಲು, ನೆಲ್ಲಿತೀರ್ಥ, ಅದ್ಯಪಾಡಿಗೆ ತೆರಳುವ ಪ್ರಮುಖ ರಸ್ತೆ ಇದಾಗಿದೆ. 

3 ವರ್ಷದಲ್ಲಿ ಕುಸಿದು ಬಿದ್ದ ಎರಡನೇ ಸೇತುವೆ!
2018ಜೂ.26ರಂದು ಬಂಟ್ಬಾಳ ತಾಲೂಕಿನ ಮುಲ್ಲರಪಟ್ನದಲ್ಲಿ ಮಂಗಳೂರು-ಸೋರ್ನಾಡು ಸಂಪರ್ಕಿಸುವ ರಸ್ತೆ ಕುಸಿದು ಬಿದ್ದಿತ್ತು. ಇದೀಗ ಮೂರೇ ವರ್ಷದ ಅಂತರದಲ್ಲಿ ಮತ್ತೊಂದು ಬೃಹತ್ ಸೇತುವೆಗೆ ಹಾನಿಯಾಗಿದೆ. 

ಹಲವು ವರ್ಷಗಳಿಂದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಮರಳು ಗಾರಿಕೆ ದಂಧೆಯೇ ಸೇತುವೆ ಕುಸಿತಕ್ಕೆ ಕಾರಣವೆನ್ನಲಾಗುತ್ತಿದೆ. ಸೇತುವೆ ಕೆಳಭಾಗದಲ್ಲೇ ಮರಳು ತೆಗೆಯುತ್ತಿದ್ದ ಕಾರಣ ಪಿಲ್ಲರುಗಳು ದುರ್ಬಲವಾಗಿ‌ ಮೂಲರಪಟ್ನ‌ ಸೇತುವೆ ಕುಸಿದು ಬಿದ್ದಿತ್ತು. ಈಗ ಅದೇ ಸರದಿ ಮರವೂರು ಸೇತುವೆಯದ್ದಾಗಿದೆ. ಸ್ಥಳಕ್ಕೆ ಕಾವೂರು-ಬಜಪೆ ಪೊಲೀಸರು ತೆರಳಿದ್ದು, ಈ ರಸ್ತೆಯಲ್ಲಿ ಜನಸಂಚಾರ-ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. 

ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಮರವೂರು ಸೇತುವೆ ಬಿರುಕಿನಿಂದ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ಕಾವೂರಿನಿಂದ ಮರವೂರು ಸೇತುವೆಯ ಇನ್ನೊಂದು ಬದಿಗೆ ಹೋಗಲು ಬಯಸುವವರು ಕಾವೂರು-ಕೂಳೂರು-ಕೆಬಿಎಸ್ ಜೋಕಟ್ಟೆ-ಪೋರ್ಕೊಡಿ-ಬಜ್ಪೆ ಮಾರ್ಗ ಅಥವಾ ಪಚ್ಚನಾಡಿ-ವಾಮಂಜೂರು-ಗುರುಪುರ-ಕೈಕಂಬ-ಬಜ್ಪೆ ಮಾರ್ಗವನ್ನು ಬಳಸಬಹುದಾಗಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು