ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೆಪ್ಟೆಂಬರ್ 19ರಂದು, ಮಂಗಳೂರಿನ ಪಾಂಡೇಶ್ವರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿ ಅಮೀರ್ ಅಲಿ (ಕೇರಳ ಮೂಲದವರು) ತನ್ನ ಸಹಪಾಠಿ ಮೊಹಮ್ಮದ್ ಅಲ್ಫಾಜ್ ಜೊತೆಗೆ ಕಾಲೇಜಿನ ಹೊರಗಿನ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ಗಳಲ್ಲಿ ಬಂದ ಸೀನಿಯರ್ಸ್ ಗುಂಪು ಇವರನ್ನು ಬಲವಂತವಾಗಿ ಅಪಹರಿಸಿದೆ. ನಂತರ ಇಬ್ಬರನ್ನೂ ನಿರ್ಜನ ಮನೆಯೊಂದರ ಕೊಠಡಿಯಲ್ಲಿ ಕೂಡಿಹಾಕಲಾಗಿದೆ.

ಕೊಠಡಿಯಲ್ಲಿ ವಿದ್ಯಾರ್ಥಿಗಳ ಬಟ್ಟೆ ಬಿಚ್ಚಿಸಿ ಚಡ್ಡಿಯಲ್ಲಷ್ಟೇ ಇರಿಸಿ, ಬೆಲ್ಟ್‌ಗಳು, ಹ್ಯಾಂಗರ್‌ಗಳು ಮತ್ತು ಕೈಗಳಿಂದ ಮನಬಂದಂತೆ ಥಳಿಸಲಾಗಿದೆ. ಹೊಡೆತದಿಂದ ಸುಸ್ತಾಗಿ ನೀರು ಕೇಳಿದಾಗ ಕಲುಷಿತ ನೀರನ್ನು ನೀಡಲಾಗಿದ್ದು, ಅದನ್ನು ಕುಡಿಯದಿದ್ದಾಗ ಮೈಮೇಲೆ ಚೆಲ್ಲಿ ವಿಕೃತಿ ಮೆರೆದಿದ್ದಾರೆ. ಈ ಇಡೀ ಕೃತ್ಯವನ್ನು ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಕೂಡ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಧ್ಯಾಹ್ನದಿಂದ ಸಂಜೆ 6 ಗಂಟೆಯವರೆಗೆ ಕೂಡಿಹಾಕಿ ದೌರ್ಜನ್ಯ ಎಸಗಿದ್ದಲ್ಲದೆ, “ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕಾಲೇಜಿನಲ್ಲಿ ನಿಮ್ಮನ್ನು ಚಾಕುವಿನಿಂದ ತುಂಡು ತುಂಡಾಗಿ ಕತ್ತರಿಸುತ್ತೇವೆ” ಎಂದು ಜೀವಬೆದರಿಕೆ ಹಾಕಿದ್ದರು. ಅಲ್ಲದೆ, ತರಗತಿಗೆ ಬರುವಾಗ “ಕ್ಲೀನ್ ಶೇವ್ ಮಾಡಿಕೊಂಡು ಬರಬೇಕು, ಶೂ ಹಾಕಬಾರದು” ಎಂದು ನಿಯಮ ಹೇರಿದ್ದರು. ಇತನ್ಮಧ್ಯೆ, ತೀವ್ರ ಹೆದರಿಕೆಯಿಂದ ಸಂತ್ರಸ್ತ ವಿದ್ಯಾರ್ಥಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು, ಅವರ ಸಲಹೆಯಂತೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು ಕೊಲೆ ಯತ್ನ, ಅಪಹರಣ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆಯ ರ‍್ಯಾಗಿಂಗ್ ನಿರೋಧಕ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಸೀದ್ ಅಮೀರ್, ಆದಿಲ್ ಎಂ., ಅರ್ಶಕ್, ಅನೀಶ್, ಉವೈಸ್, ರೋಹನ್ ರಮೇಶ್, ಆದಿಲ್ ವಿ.ಪಿ., ರೆಹಾನ್ ಎಂ.ಪಿ. ಮತ್ತು ಶಿನಾಸ್ ಎಂಬ 9 ಮಂದಿ ಸೀನಿಯರ್ಸ್ ವಿರುದ್ಧ ಪ್ರಕರಣ ದಾಖಲಾಗಿದ್ದು. ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದೆ.

Spread the love
  • Related Posts

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    Banglore: ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಣ್ಣ ಪ್ರಮಾಣದ ನಿವೇಶನ (ಪ್ಲಾಟ್) ಹೊಂದಿರುವ ನಾಗರಿಕರಿಗೆ ಮನೆ ನಿರ್ಮಾಣ ಮತ್ತು ಲೇಔಟ್ ಅನುಮೋದನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹಾಗೂ ವಿಳಂಬವನ್ನು ತಪ್ಪಿಸಲು 1000 ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಪ್ಲಾನ್ ಅನುಮೋದನೆಗೆ ಗ್ರಾಮ…

    Spread the love

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಬೆಂಗಳೂರು, ಸೆ.24: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ Special Leave Petition (Crl.) No.5763 of 2026ರ ವಿಚಾರಣೆಯ ಹಿನ್ನೆಲೆಯಲ್ಲಿ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ. ಎಸ್‌ಐಟಿ ತಂಡದ…

    Spread the love

    You Missed

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 3 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 3 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 4 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 9 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 18 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 14 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ