ಮಂಗಳೂರು : ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದಡ್ಡಲ್ ಕಾಡ್ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಮತ್ತು ಕಾಂಡೋಮ್ ಪತ್ತೆಯಾಗಿದ್ದು ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಪ್ರಯತ್ನ ನಡೆದಿದೆ.
ಅವಹೇಳನಕಾರಿ ಬರಹ ಮತ್ತು ಅನುಚಿತ ವಸ್ತಗಳನ್ನು ಕಾಣಿಕೆ ಹುಂಡಿಯಲ್ಲಿ ಹಾಕಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಉರ್ವ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.