74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ : ಪ್ರಧಾನಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು

ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ“,

ನವದೆಹಲಿ: ದೇಶದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಆತ್ಮ ನಿರ್ಭರ ಭಾರತ’, ರಕ್ಷಣೆ, ಕೃಷಿ ಕ್ಷೇತ್ರಗಳಲ್ಲಿ ಸ್ವಾವಲಂಬನೆ, ಮಹಿಳಾ ಸಬಲೀಕರಣ, ಅಂತರರಾಷ್ಟ್ರೀಯ ಬಾಂಧವ್ಯ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

ಮೋದಿ ಅವರು ಸ್ವಾತಂತ್ರ್ಯೋತ್ಸವ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವುದು ಇದು 7ನೇ ಬಾರಿ. ಭಾಷಣದ ಮುಖ್ಯಾಂಶಗಳು ಇಲ್ಲಿವೆ.

ದೇಶದ ಉಜ್ವಲ ಭವಿಷ್ಯಕ್ಕೆ ಕೊರೊನಾ ಅಡ್ಡಿಯಾಗಿದೆ. ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಕೊರೊನಾ ಯೋಧರ ಕಾರ್ಯ ಶ್ಲಾಘನೀಯ.

ನಾವು ಸಂಕಷ್ಟದ ಸಮಯಗಳನ್ನು ಎದುರಿಸುತ್ತಿದ್ದೇವೆ ನಾನು ಇಂದು (ಕೆಂಪು ಕೋಟೆಯಲ್ಲಿ) ಚಿಕ್ಕ ಮಕ್ಕಳನ್ನು ನನ್ನ ಮುಂದೆ ನೋಡಲು ಸಾಧ್ಯವಾಗುತ್ತಿಲ್ಲ. ಕೊರೊನಾ ಎಲ್ಲರಿಗೂ ತಡೆಯೊಡ್ಡಿದೆ.

ಈ ಕೋವಿಡ್ ಕಾಲದಲ್ಲಿ, ಕೊರೊನಾ ಯೋಧರು ‘ಸೇವಾ ಪಾರ್ಮೋ ಧರ್ಮಃ’ ಮಂತ್ರವನ್ನು ಗಮನದಲ್ಲಿಟ್ಟುಕೊಂಡು ಭಾರತದ ಜನರಿಗೆ ಸೇವೆ ಸಲ್ಲಿಸಿದ್ದಾರೆ ಅವರಿಗೆ ಕೃತಜ್ಞತೆಗಳು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಸುವ ದಿನ ಇದು. ನಮ್ಮ ಭದ್ರತೆಯನ್ನು ಖಾತರಿಪಡಿಸುವ ಸೇನೆ, ಅರೆಸೈನಿಕ ಮತ್ತು ಪೊಲೀಸರು ಸೇರಿದಂತೆ ಭದ್ರತಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವ ದಿನ ಇದು
ಭಾರತ ಯುವ ಶಕ್ತಿಯಿಂದ ತುಂಬಿದ ದೇಶ, ‘ಆತ್ಮ ನಿರ್ಭರ’ಕ್ಕೆ ಆತ್ಮವಿಶ್ವಾಸ ಹೊಂದಿರುವ ದೇಶ ಭಾರತ
ಸ್ವತಂತ್ರ ಭಾರತದ ಮನಸ್ಥಿತಿ ‘ವೋಕಲ್ ಫಾರ್ ಲೋಕಲ್ (ಸ್ಥಳೀಯ ಉತ್ಪನ್ನಗಳಿಗೆ ನಾವು ದನಿಯಾಗಬೇಕು)’ ಆಗಿರಬೇಕು. ಸ್ಥಳೀಯ ಉತ್ಪನ್ನಗಳನ್ನು ನಾವು ಇಷ್ಟಪಡಬೇಕು. ನಾವಿದನ್ನು ಮಾಡದಿದ್ದರೆ ಸ್ಥಳೀಯವಾಗಿ ಉತ್ತಮ ಉತ್ಪನ್ನಗಳ ತಯಾರಿಗೆ ಅವಕಾಶ ದೊರೆಯುವುದಿಲ್ಲ, ಪ್ರೋತ್ಸಾಹ ದೊರೆಯುವುದಿಲ್ಲ.

ಕಳೆದ ವರ್ಷ ವಿದೇಶಿ ನೇರ ಹೂಡಿಕೆಯಲ್ಲಿ ಶೇ 18ರ ದಾಖಲೆಯ ಹೆಚ್ಚಳವಾಗಿತ್ತು. ಜಗತ್ತು ಭಾರತದ ಮೇಲೆ ವಿಶ್ವಾಸವಿರಿಸಿದೆ. ನಮ್ಮ ಪ್ರಜಾಪ್ರಭುತ್ವ, ಆರ್ಥಿಕತೆಯ ತಳಹದಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ನೀತಿಗಳನ್ನು ರೂಪಿಸಿದ್ದೇವೆ.

‘ಆತ್ಮ ನಿರ್ಭರ ಭಾರತ’ ಸಾಧಿಸಲು ಕೃಷಿ ಕ್ಷೇತ್ರ, ಕೃಷಿಕರು ‘ಆತ್ಮ ನಿರ್ಭರ’ರಾಗಬೇಕಿದೆ. ಕೃಷಿಕರಿಗೆ ಹೆಚ್ಚು ಮೂಲಸೌಕರ್ಯ ಕಲ್ಪಿಸಲು ₹1 ಲಕ್ಷ ಕೋಟಿ ‘ಕೃಷಿ ಮೂಲಸೌಕರ್ಯ ನಿಧಿ’ ಸ್ಥಾಪಿಸಲಾಗಿದೆ: ಮೋದಿ

2014ಕ್ಕೂ ಮೊದಲು ಕೇವಲ 5 ಡಜನ್ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕವಿತ್ತು. ಕಳೆದ 5 ವರ್ಷಗಳಲ್ಲಿ 1.5 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಒದಗಿಸಲಾಗಿದೆ. ಮುಂದಿನ ಸಾವಿರ ದಿನಗಳಲ್ಲಿ ಎಲ್ಲ ಹಳ್ಳಿಗಳಿಗೆ ದೊರೆಯಲಿದೆ.

‘ಆತ್ಮ ನಿರ್ಭರ ಭಾರತ’ ಸಾಧಿಸಲು ಶಿಕ್ಷಣ ಬಹು ಮುಖ್ಯವಾದದ್ದು. ಅದಕ್ಕಾಗಿ ಹೊಸ ಶಿಕ್ಷಣ ನೀತಿ ರೂಪಿಸಿದ್ದೇವೆ.

ಮಹಿಳೆಯರು ಅವಕಾಶ ಸಿಕ್ಕಾಗಲೆಲ್ಲ ಭಾರತವನ್ನು ಗಟ್ಟಿಗೊಳಿಸಿದ್ದಾರೆ. ಹೆಮ್ಮೆಗೊಳ್ಳುವಂತೆ ಮಾಡಿದ್ದಾರೆ
ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ.

ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದೇಶದಲ್ಲಿ ಮೂರು ಲಸಿಕೆಗಳು ಪ್ರಾಯೋಗಿಕ ಹಂತದಲ್ಲಿವೆ. ವಿಜ್ಞಾನಿಗಳು ಸಮ್ಮತಿ ಸೂಚಿಸಿದ ಬೆನ್ನಲ್ಲೇ ಅಪಾರ ಪ್ರಮಾಣದ ಉತ್ಪಾದನೆ ಆರಂಭವಾಗಲಿದೆ.

ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಯುಗ ಶುರುವಾಗಿದೆ

ನಮ್ಮೊಂದಿಗೆ ಗಡಿ ಹಂಚಿಕೊಂಡಿರುವವರು ಮಾತ್ರ ನೆರೆಯವರಲ್ಲ. ಸಹೃದಯಿ ಬಾಂಧವ್ಯ ಹೊಂದಿಕೊಂಡಿರುವವರೂ ನೆರೆಯವರೇ. ಕಳೆದ ಕೆಲವು ಸಮಯಗಳಿಂದ ಭಾರತವು ಎಲ್ಲ ದೇಶಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಂಡಿದೆ

ಭಯೋತ್ಪಾದನೆ, ಭೂಪ್ರದೇಶ ವಿಸ್ತರಣಾ ವಾದವನ್ನು ಭಾರತ ಸೋಲಿಸುತ್ತಿದೆ. ಎಲ್‌ಒಸಿಯಿಂದ ಎಲ್‌ಎಸಿ ವರೆಗೆ ನಮ್ಮ ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟವರಿಗೆ ನಮ್ಮ ಯೋಧರು ಅವರದ್ದೇ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ