ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಮೋದಿಗೆ ಜನ ಭರ್ಜರಿ ಸ್ವಾಗತ ಕೋರಿದ್ದಾರೆ. ನಿಗದಿತ ಸಮಯಕ್ಕೆ ಮೊದಲೇ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ ನಡೆಯುತ್ತಿರುವ ರೋಡ್ ಶೋ ನಲ್ಲಿ ಭಾಗವಹಿಸಿದರು.

ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್‌ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ. ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕನನ್ನು ಹತ್ತಿರದಿಂದ ನೋಡಿ ಕಣ್ಣುಂಬಿಕೊಂಡರು. ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.ಈ ನಡುವೆ ಉಡುಪಿ ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ ಎಂದು ಹೇಳಿದ್ದಾರೆ.ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ