ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.ಅವರನ್ನು ಗುರುಗಾಂವ್‍ನ ಮೆಡಾಂಟ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾದವ್ ಅವರಿಗೆ ಇದುವರೆಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು ಕಂಡು ಬರದಿದ್ದರೂ ಅವರಿಗೆ ಸಾಂಕ್ರಾಮಿಕ ರೋಗ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.ಅಗತ್ಯವಾದ ಎಲ್ಲಾ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಡಾಂಟ ಆಸ್ಪತ್ರೆಯ ತಜ್ಞ ವೈದ್ಯರ ತಂಡ ತಿಳಿಸಿದೆ. ಕೆಲ ದಿನಗಳ ಹಿಂದೆ ವಯೋ ಸಹಜ ಅನಾರೋಗ್ಯದಿಂದ ತೀವ್ರ ಅಸ್ವಸ್ಥರಾಗಿ ಚಿಕಿತ್ಸೆ ಪಡೆದಿದ್ದ ಮುಲಾಯಂ ಸಿಂಗ್ ಯಾದವ್ ಲಕ್ನೋದ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದರು. .