ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಲಿ : ಬಿಎಸ್ ವೈ

ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು, ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ಅಂದುಕೊಂಡಿರಲಿಲ್ಲ. ಎಲ್ಲರೂ ಇದನ್ನು ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

READ ALSO