ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನ ಉರುಳಿ ಇಬ್ಬರು ಮಕ್ಕಳು ದುರ್ಮರಣ 20 ಮಂದಿ ಗಾಯ

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಭಾನುವಾರ ತಡರಾತ್ರಿ ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ

ಮದುವೆ ದಿಬ್ಬಣಕ್ಕೆ ಹೊರಟಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

READ ALSO

ಮೃತರನ್ನು ಪುಷ್ಪಲತಾ (10) ಮತ್ತು ಪಲ್ಲವಿ (9) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕೆ ಆರ್ ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ನಾಲೆಯಲ್ಲಿ ನೀರಿಲ್ಲದ ಕಾರಣ ದೊಡ್ಡ ಅಪಘಾತವೊಂದು ತಪ್ಪಿದೆ ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ..