ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾಗೆ ಚಾಲನೆ.

ಮೈಸೂರು : ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು

ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದೆ. ಈ ಬಾರಿ ಸರಳವಾಗಿ ಸಾಂಪ್ರದಾಯಿಕ ದಸರಾ ಆಚರಣೆ ನಡೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವರಾತ್ರಿ ಸಡಗರ ಸಂಭ್ರಮ ಮನೆ ಮಾಡಿದೆ. ಕೊರೋನಾ ಕಾರಣದಿಂದಾಗಿ ನಿಬಂಧನೆಗಳೊಂದಿಗೆ ಸಾಂಪ್ರದಾಯಿಕ ಕಾರ್ಯಕ್ರಮ ನಡೆಸಲಾಗುವುದು.

READ ALSO

ದೇಶ ಹಾಗೂ ರಾಜ್ಯ ಕೊರೋನಾ ಮುಕ್ತವಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಕೋರಿಕೊಂಡಿದ್ದೇನೆ. ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಚಾಲನಾ ಮಹೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ದಾದಿಯರು ಕೊರೋನಾ ಸಂದರ್ಭದಲ್ಲಿ ವಿಶೇಷ ಸೇವೆ ನೀಡಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ, ಮಾಸ್ಕ್ – ಸಾಮಾಜಿಕ ಅಂತರ – ಸ್ಯಾನಿಟೈಸರ್ ಅನ್ನು ಬಳಸಿ ಕೊರೋನಾ ಹೋಗಲಾಡಿಸಲು ಶ್ರಮಿಸಬೇಕು ಎಂದರು.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆರು ಕೊರೋನಾ ಯೋಧರನ್ನು ಸನ್ಮಾನಿಸಲಾಯಿತು. ಕೊರೋನಾ ವಾರಿಯರ್ಸ್ ಗಳಾದ ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್ ಅವರನ್ನು ಆಯಾ ಕ್ಷೇತ್ರದ ಪ್ರತಿನಿಧಿಗಳನ್ನಾಗಿ ಸನ್ಮಾನಿಸಲಾಯಿತು.