ಬೆಂಗಳೂರು : ಇಂದು ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಇಂದು ನಡೆಯಲಿದ್ದು, ಸಿಎಂ ಯಡಿಯೂರಪ್ಪ ಅವರು ಕೆಂಪೇಗೌಡರ ಅಂಚೆ ಚೀಟಿ ಲೋಕಾರ್ಪಣೆ ಮಾಡಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ 45 ಕೋಟಿ ರೂ. ವೆಚ್ಚದ ಕೆಂಪೇಗೌಡರ ಅಧ್ಯಯನ ಕೇಂದ್ರದ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.
ಇಂದಿನ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.