ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

ಉಡುಪಿ: ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ.

ಮಹತ್ವದ ಬೆಳವಣಿಗೆಯಲ್ಲಿ ಕಾಡಿನಲ್ಲಿ ಶೂಟೌಟ್‌ ಸುದ್ದಿಯೊಂದು ಕೇಳಿಬಂದಿದೆ. ನಕ್ಸಲ್‌ ಮುಖಂಡ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆಂಬ ಮಾಹಿತಿ ಲಭ್ಯವಾಗಿದೆ.ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ್ ಚಲನವಲನದ ಬಗ್ಗೆ ಎಎನ್‌ಎಫ್‌ಗೆ ಮಾಹಿತಿ ಲಭ್ಯವಾಗಿತ್ತು. ಈ ನಡುವೆ ANF ತಂಡ ನಿನ್ನೆ ನಡೆಸಿದ್ದ ಕೂಂಬಿಂಗ್‌ ವೇಳೆ ವಿಕ್ರಂಗೌಡ ನೇತೃತ್ವದ ನಕ್ಸಲ್‌ ತಂಡ ಮುಖಾಮುಖಿಯಾಗಿದೆ. ಈ ವೇಳೆ ನಡೆದ ಶೂಟೌಟ್‌ನಲ್ಲಿ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯಲ್ಲಿ ಪೀತೆ ಬೈಲ್‌ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಈತ ಮೂಲತಃ ಹೆಬ್ರಿಯವನು ಎನ್ನಲಾಗಿದ್ದು, ಶೃಂಗೇರಿ, ಕಾರ್ಕಳ ಭಾಗದಲ್ಲಿ ಸಕ್ರಿಯನಾಗಿದ್ದ ಕೇರಳದಲ್ಲಿ ನಕ್ಸಲ್‌ ಚಟುವಟಿಕೆಗೆ ಥಂಡರ್‌ ಬೋಲ್ಟ್‌ ಟೀಂ ಬಿಗಿ ಮಾಡಿದ ಬಳಿಕ ನಕ್ಸಲ್‌ ಟೀಂ ಕರ್ನಾಟಕಕ್ಕೆ ವಾಪಸ್‌ ಆಗಿತ್ತು. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಡಗಾರು ಲತಾ ಓಡಾಟ ನಡೆಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತಷ್ಟೆ ಅಲ್ಲದೆ ಆ ಸಂಬಂಧ ಪೊಲೀಸರು uapa ಕಾಯ್ದೆ ಅಡಿ ಕೇಸ್‌ ದಾಖಲಿಸಿದ್ದರು.

ಇದೆಲ್ಲಾ ಬೆಳವಣಿಗೆ ಬಳಿಕ ಇದೀಗ ವಿಕ್ರಂಗೌಡ ಪೊಲೀಸ್‌ ಶೂಟೌಟ್‌ನಲ್ಲಿ ಎನ್‌ಕೌಂಟರ್‌ ಆಗಿದ್ದಾನೆ. ಹೆಬ್ರಿಯ ಪೀತೆಬೈಲ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. 13 ವರ್ಷಗಳ ಬಳಿಕ ಎನ್‌ಕೌಂಟರ್‌ ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ ನೊಂದಿಗೆಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.

ಯಾರು ಈ ವಿಕ್ರಂ ಗೌಡ?

ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ.ಮತ್ತೆ ಬಿರುಸುಗೊಳ್ಳುತ್ತಿರುವ ನಕ್ಸಲ್ ಚಟುವಟಿಕೆ ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.

ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆಳ್ತಂಗಡಿ: ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ ಹಾನಿ ಉಂಟುಮಾಡಿತ್ತು. ಬಳಿಕ ಸೋಮವಾರ ಇದೇ ಗ್ರಾಮದ…

    Spread the love

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ