ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಗೇರುಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕಿನ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ , ಈಗಾಗಲೇ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿ ಇದೀಗ ನಾಳ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಜನಾರ್ದನ ಪೂಜಾರಿ, ಅಂಬಾ ಆಳ್ವ, ದಿನೇಶ್ ಕುಮಾರ್ ಕೆ., ವಿಜಯ ಎಚ್. ಪ್ರಸಾದ್, ಉಮೇಶ್ ಕೇಲ್ದಡ್ಕ, ರಾಜೇಶ್ ಶೆಟ್ಟಿ ಹಾಗೂ ವೇ.ಮೂ. ರಾಘವೇಂದ್ರ ಅಸ್ರಣ್ಣ( ಪ್ರದಾನ ಅರ್ಚಕರು) ಆಯ್ಕೆಯಾದರು.
ಭುವನೇಶ್ ಗೇರುಕಟ್ಟೆ ಅವರು ತಾಲೂಕಿನ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಈಗಾಗಲೇ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಇದೀಗ ನಾಳ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಆಡಳಿತಾಧಿಕಾರಿ ಮಲ್ಲೇಶ್ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.