ಒಂದರಿಂದ ನಾಲ್ಕನೇ ತರಗತಿಗಳ ವಿದ್ಯಾರ್ಥಿಗಳಿಗೆ ಆಕಾಶವಾಣಿ‌ಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮ

ಬೆಂಗಳೂರು: ರಾಜ್ಯದ ಒಂದರಿಂದ ನಾಲ್ಕನೇ ತರಗತಿ ವರೆಗಿನ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಯು ಆಕಾಶವಾಣಿ‌ಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮ‌ಗಳನ್ನು ಜ. 11 ರಿಂದ ತೊಡಗಿದಂತೆ ಎ. 5 ರ ವರೆಗೆ ಪ್ರಸಾರ ಮಾಡಲಿರುವುದಾಗಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸೋಮವಾರದಿಂದ ಶುಕ್ರವಾರದ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. ಕಲಿಯುತ್ತಾ ನಲಿಯೋಣ ಎಂಬ ಹೆಸರಿನಲ್ಲಿ ಆಕಾಶವಾಣಿ ಈ ಕಾರ್ಯಕ್ರಮ‌ವನ್ನು ಪ್ರಸಾರ ಮಾಡಲಿದೆ. ನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10.15 ರಿಂದ 10.30 ರ ವರೆಗೆ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ ಇಲಾಖೆ ಈ ಪ್ರಯತ್ನ‌ಕ್ಕೆ ಮುಂದಾಗಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಅದರೊಂದಿಗೆ ಈ ಕಾರ್ಯಕ್ರಮ‌ದಲ್ಲಿ ವಿದ್ಯಾರ್ಥಿಗಳಿಗೂ ಭಾಗವಹಿಸಲು ಅವಕಾಶ‌ವಿದ್ದು, ಪೋಷಕರು ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಿಸಿ whatsapp ನಂಬರ್ 9449417612 ಗೆ ಕಳುಹಿಸಿದರೆ , ಅದನ್ನು ಪ್ರಸಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ 13 ಆಕಾಶವಾಣಿ ಕೇಂದ್ರಗಳು ಈ ಕಾರ್ಯಕ್ರಮ‌ವನ್ನು ಪ್ರಸಾರ ಮಾಡಲಿದ್ದು, ಆ ಬಳಿಕ ಯೂಟ್ಯೂಬ್ ನಲ್ಲಿ ಈ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಇರುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 65 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ