ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್! ಜನವರಿ 2 ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ : ರೂಪಾಂತರಗೊಂಡ ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಜನವರಿ 2 ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಹೌದು. ಡಿಸೆಂಬರ್ 30 ರಿಂದ 3 ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಆರ್ ಲತಾ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 30 ಬೆಳಗ್ಗೆ 6 ಗಂಟೆಯಿಂದ ಜನವರಿ 2 ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಎಂಟ್ರಿ ಇರುವುದಿಲ್ಲ. ಈ ಮೂಲಕ ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಯ ಪ್ಲ್ಯಾನ್ ಮಾಡಿಕೊಂಡವರಿಗೆ ಬೇಸರವಾಗಿದೆ.

READ ALSO