ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನರ ಕಷ್ಟಕ್ಕೆ ವೇಗವಾಗಿ ಸರ್ಕಾರಿ ವ್ಯವಸ್ಥೆಯಲ್ಲಿ ಸ್ಪಂದನೆಯನ್ನು ಒದಗಿಸುವ ಉದ್ದೇಶದೊಂದಿಗೆ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ “ಜನರ ಬಳಿಗೆ -ತಾಲೂಕು ಆಡಳಿತ” ಎನ್ನುವ ವಿಭಿನ್ನ ಜನಸ್ನೇಹಿ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ಇಂದು ಚಾಲನೆ ನೀಡಿದರು.
ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲೂ ಈ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು ಮೊದಲ ಹಂತವಾಗಿ ಇಂದು ನಾರಾವಿ ಗ್ರಾಮ ಪಂಚಾಯತ್ ನಲ್ಲಿ “ಜನರ ಬಳಿಗೆ -ತಾಲೂಕು ಆಡಳಿತ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಶೀಘ್ರ ಪರಿಹಾರದ ಬರವಸೆ ನೀಡಿದರು.