ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

ಬೆಳ್ತಂಗಡಿ, ಜು. 8: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಸೇರಿದಂತೆ ಒಟ್ಟು ರೂ.4.00 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಎರಡೂ ಕಡೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನೂತನ ಕಟ್ಟಡಗಳ ನಿರ್ಮಾಣದ ತುರ್ತು ಅಗತ್ಯತೆಯ ಬಗ್ಗೆ ಮಾನ್ಯ ಸಚಿವರ ಗಮನಕ್ಕೆ ವಿಷಯವನ್ನು ತಂದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಿರಂತರವಾಗಿ ಅನುಸರಣೆ ನಡೆಸಿ ಅನುದಾನ ಬಿಡುಗಡೆಗೊಳಿಸಲು ಮನವಿ ಮಾಡಲಾಗಿತ್ತು. ಸರ್ಕಾರವು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಮಂಜೂರು ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ಮೂಲಕ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಸುರಕ್ಷಿತ, ಆಧುನಿಕ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣದೊಂದಿಗೆ ಅಗತ್ಯ ವಸತಿ ಸೌಲಭ್ಯಗಳು ಲಭ್ಯವಾಗಲಿವೆ.ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ, ಮಾನ್ಯ ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    ಬೆಳ್ತಂಗಡಿ:ಅ.01. ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖಾರಿಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ ಕೊನೆಗೂ ಸರ್ಕಾರದಿಂದ ಅಧಿಕೃತ ಸ್ಪಂದನೆ ದೊರೆತಿದೆ.…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್