ದೇಶಾದ್ಯಂತ ನಾಳೆ ವರ್ತಕರ ಸಂಘಟನೆ ಕರೆ ನೀಡಿರುವ ಬಂದ್ ಗೆ ರಾಜ್ಯ ಲಾರಿ ಮಾಲಕರ ಸಂಘದ ಬೆಂಬಲ!

ಬೆಂಗಳೂರು: ಜಿಎಸ್ ಟಿ, ಇಂಧನ ದರ ಏರಿಕೆ, ಇ-ವೇ ಬಿಲ್ ವಿರೋಧಿಸಿ ವರ್ತಕರ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿಸಿ ವರ್ತಕರ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾಳೆ 26ರಂದು ದೇಶಾದ್ಯಂತ ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿವೆ ಎಂದು ತಿಳಿಸಿದ್ದಾರೆ.

READ ALSO

ರಾಜ್ಯದಲ್ಲೂ ಲಾರಿ ಸಂಚಾರ ಬಂದ್ ಆಗಲಿದ್ದು, ನಾಳೆ ಬೆಳಗ್ಗೆಯಿಂದ ಸಂಜೆವರೆಗೂ ಲಾರಿ ಸಂಚಾರ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಡೀಸೆಲ್, ಟೋಲ್, ವಿಮೆ ಹೆಚ್ಚಳದಿಂದ ಟ್ರಕ್ಕಿಂಗ್ ಉದ್ಯಮದಲ್ಲಿ ನಾವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಸ್ಕ್ರಾಪಿಂಗ್ ನೀತಿ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್6 ವಾಹನಗಳ ವೆಚ್ಚ, ವಾಹನಗಳ ಬಿಡಿಭಾಗಗಳ ದರ ಹೆಚ್ಚಳದಿಂದ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.