ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

ವ್ಯಸನ ತೊರೆದು ಮೌಲ್ಯಯುತ ಜೀವನ ನಡೆಸಿ:

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ರಿ., ಸಕಲೇಶಪುರ ಇದರ ವತಿಯಿಂದ ಆಯೋಜಿಸಲಾದ ನವಜೀವನೋತ್ಸವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು ನವಜೀವನ ಸದಸ್ಯರನ್ನುದ್ದೇಶಿಸಿ ಮಾತನಾಡಿದರು.

ಆರೋಗ್ಯ, ಶಿಸ್ತು ಮತ್ತು ಮಾನವೀಯತೆಯೇ ಉತ್ತಮ ಜೀವನದ ದಾರಿ:

ವ್ಯಸನಗಳನ್ನು ಸಂಪೂರ್ಣವಾಗಿ ತ್ಯಜಿಸಿ ಆರೋಗ್ಯಕರ, ಶಿಸ್ತಿನ ಹಾಗೂ ಮೌಲ್ಯಯುತ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಮದ್ಯಪಾನ, ಗುಟ್ಕಾ, ಗಾಂಜಾ, ಸಿಗರೇಟ್, ಬೀಡಿ ಸೇರಿದಂತೆ ಎಲ್ಲ ರೀತಿಯ ವ್ಯಸನಗಳು ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಅಭಿವೃದ್ಧಿಗೆ ಮಾರಕವಾಗಿದ್ದು, ಅವುಗಳನ್ನು ತೊರೆದು ಆತ್ಮವಿಶ್ವಾಸದಿಂದ ಹೊಸ ಬದುಕನ್ನು ಆರಂಭಿಸಬೇಕು ಎಂದು ತಿಳಿಸಿದರು. ಪ್ರತಿದಿನ ಬೆಳಿಗ್ಗೆ ಬೇಗ ಎದ್ದು ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಮಾಡುವುದರೊಂದಿಗೆ ದೇವರ ಮೇಲೆ ಭಕ್ತಿ ಇಟ್ಟು ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು. ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳದೆ, ತಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸಿಕೊಂಡು ತೃಪ್ತಿಯಿಂದ ಬದುಕಿದರೆ ಜೀವನದಲ್ಲಿ ನಿಜವಾದ ಸಂತೋಷ ಸಿಗುತ್ತದೆ ಎಂದು ಹೇಳಿದರು.

ಕುಟುಂಬದ ಜವಾಬ್ದಾರಿಯನ್ನು ಅರಿತು ಹೆಂಡತಿ, ಮಕ್ಕಳು ಹಾಗೂ ಮನೆಯವರೊಂದಿಗೆ ಪ್ರೀತಿ, ಗೌರವ ಮತ್ತು ಕಾಳಜಿಯಿಂದ ಬದುಕಬೇಕು. ಹಣಕ್ಕಿಂತ ಸಂಬಂಧಗಳು ಅಮೂಲ್ಯವಾಗಿದ್ದು, ಮನೆಯಲ್ಲಿ ಶಾಂತಿ ಮತ್ತು ಪರಸ್ಪರ ವಿಶ್ವಾಸವನ್ನು ಬೆಳೆಸಿಕೊಳ್ಳುವುದು ಅಗತ್ಯ , ಜಾತಿ–ಧರ್ಮಕ್ಕಿಂತ ಮಾನವೀಯತೆ ದೊಡ್ಡದು. ಸಮಾಜದಲ್ಲಿ ಮೊದಲು ನಾವು ಬದಲಾಗಬೇಕು, ನಂತರ ಕುಟುಂಬ ಮತ್ತು ಸಮಾಜಕ್ಕೆ ಮಾದರಿಯಾಗಬೇಕು. ಕೃಷಿ, ಪಶುಸಂಗೋಪನೆ ಹಾಗೂ ಸ್ವಯಂ ಉದ್ಯೋಗದಂತಹ ಕ್ಷೇತ್ರಗಳಲ್ಲಿ ತೊಡಗಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಸಮಾಜದ ಅಭಿವೃದ್ಧಿ ಸಾಧ್ಯ:

ತೀರ್ಥಯಾತ್ರೆ, ಸತ್ಸಂಗ, ಒಳ್ಳೆಯ ಪುಸ್ತಕಗಳ ಓದು ಹಾಗೂ ಮಹನೀಯರ ಜೀವನದಿಂದ ಸ್ಫೂರ್ತಿ ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಸಂಘಟಿತವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡು ಪರಸ್ಪರ ಸಹಕಾರದಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ವ್ಯಸನಗಳನ್ನು ತ್ಯಜಿಸಿ ಆರೋಗ್ಯಕರ ಜೀವನಶೈಲಿ, ಉತ್ತಮ ಚಿಂತನೆ, ಮಾನವೀಯ ಮೌಲ್ಯಗಳು ಹಾಗೂ ಕುಟುಂಬದ ಜವಾಬ್ದಾರಿಯೊಂದಿಗೆ ಬದುಕಿದರೆ ವ್ಯಕ್ತಿ, ಕುಟುಂಬ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇದರ ಯೋಜನಾಧಿಕಾರಿ ಕಿಶೋರ್, ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗ ಇದರ ಯೋಜನಾಧಿಕಾರಿ ಮುಖೇಶ್ ಕ್ಷೇತ್ರ ಯೋಜನಾಧಿಕಾರಿ ರಾಜೇಶ್ ಎಂ ಕಾನರ್ಪ, ನವಜೀವನ ಸದಸ್ಯರು, ನವಜೀವನ ಪೋಷಕರು, ಹಾಗೂ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು.

Spread the love
  • Related Posts

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದ ಜನರ ಕೃಷಿ ಹಾಗೂ ಜೀವನೋಪಾಯಕ್ಕೆ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಆತಂಕವನ್ನು ನಿವಾರಿಸಲು, ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ಪ್ರತ್ಯೇಕಿಸುವಂತೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಅವರು ಮುಖ್ಯಮಂತ್ರಿ ಡಿ.ಕೆ.…

    Spread the love

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಧರ್ಮಸ್ಥಳ: ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ…

    Spread the love

    You Missed

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 3 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 9 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 9 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 16 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 15 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 11 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ