ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ರಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ನೇತೃತ್ವದಲ್ಲಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವರ ಸಹಭಾಗಿತ್ವದಲ್ಲಿ ಎಸ್‌ಎಸ್‌ಎಲ್‌ಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಾವಕಾಶಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವ ‘ಶೈಕ್ಷಣಿಕ ಮಾಹಿತಿ ಕಾರ್ಯಾಗಾರ’ ನಡೆಯಿತು.
ಕಾರ್ಯಕ್ರಮವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ರೋ. ಡಾ. ಪ್ರಕಾಶ್ ಪ್ರಭು ಉದ್ಘಾಟಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಾಗಾರಗಳು ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಮೋರ್ತಾಜೆ ಮಾತನಾಡಿ, ನಾವೂರು ದೇವಸ್ಥಾನದ ಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ, ಸೇವಾ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಪ್ರದೀಪ್ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ನಾವೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ರಾಜೇಂದ್ರ ಭಟ್ ಹಾಗೂ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಜಾಕಿನ್ ಬಿನ್ ಸರಾವೊ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೋ. ಸುನಿಲ್ ಪಂಡಿತ್ ವಿದ್ಯಾರ್ಥಿಗಳಿಗೆ ವಿವಿಧ ಶಿಕ್ಷಣಾವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಇಂದಿನ ಕಾಲದಲ್ಲಿ ಅನೇಕ ಅವಕಾಶಗಳಿದ್ದು, ತಮ್ಮ ಆಸಕ್ತಿಗೆ ತಕ್ಕ ಕ್ಷೇತ್ರವನ್ನು ಆಯ್ಕೆಮಾಡಿಕೊಳ್ಳುವುದು ಅತ್ಯಂತ ಮುಖ್ಯವೆಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಕೆ. ಧರ್ಣಪ್ಪ ಮೂಲ್ಯ ನಿರೂಪಿಸಿದರು. ಗಣೇಶ್ ಗೌಡ ನೆಲ್ಲಿಪಲ್ಕೆ ವಂದಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಪೂರ್ವಾಧ್ಯಕ್ಷ ಎ.ಬಿ. ಉಮೇಶ್ ಅತ್ಯಡ್ಕ, ಟ್ರಸ್ಟಿಗಳಾದ ಗಣೇಶ್ ಕಣಾಲು, ತಿಮ್ಮಪ್ಪ ಜಿ., ಹರೀಶ್ ಕಾರಿಂಜ, ಕೋಶಾಧಿಕಾರಿ ಉಮೇಶ್ ಪ್ರಭು, ಸಂಚಾಲಕರಾದ ಕೆ. ಮೋಹನ್ ಬಂಗೇರ ಕಾರಿಂಜ, ನಿವೃತ್ತ ಬ್ಯಾಂಕ್ ಪ್ರಬಂಧಕ ಸೂರ್ಯನಾರಾಯಣ ಭಟ್, ಮಹಿಳಾ ಸಮಿತಿ ಅಧ್ಯಕ್ಷೆ ಪ್ರಿಯಾ ಲಕ್ಷ್ಮಣ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗೌಡ ದೇರ್ಲೆಕ್ಕಿ ಹಾಗೂ ಪೋಷಕರು ಉಪಸ್ಥಿತರಿದ್ದರು.





