ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆ!

ಬೆಳ್ತಂಗಡಿ: ಕರಾವಳಿಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜೀವನದಿ ನೇತ್ರಾವತಿ ತುಂಬಿಹರಿಯುತ್ತಿದ್ದು ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ.

READ ALSO

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸ್ನಾನಘಟ್ಟದ ಸಮೀಪದ ಅಣೆಕಟ್ಟು ಸಮಾನಂತರವಾಗಿ ನೀರು ಹರಿಯುತ್ತಿದ್ದು, ಮುಳುಗಡೆ ಭೀತಿ ಎದುರಾಗಿದೆ.

ಈ ವರ್ಷದ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದರಿಂದ ನದಿ ನೀರು ಗರಿಷ್ಠಮಟ್ಟದಲ್ಲಿ ಏರಿಕೆ ಕಂಡಿದೆ.

ನಿರಂತರವಾಗಿ ಮಳೆಯಾದಲ್ಲಿ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷವೂ ಇದೇ ಸಂದರ್ಭದಲ್ಲಿ ಮಳೆ ಸುರಿದಿದ್ದ ಪರಿಣಾಮ ಇಲ್ಲಿ ಅತೀವ ಹಾನಿಯಾಗಿತ್ತು.

ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ಭಾರಿ ಮಳೆಯಾಗುತ್ತಿದ್ದು, ನದಿಪಾತ್ರದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು ಸೂಕ್ತವಾಗಿದೆ.