ರಾಜ್ಯದಲ್ಲಿ 100 ಹೊಸ ಪೊಲೀಸ್‌ ಠಾಣೆಗಳ ನಿರ್ಮಾಣ ಪೊಲೀಸ್‌ ಸಿಬ್ಬಂದಿಗಾಗಿ 10 ಸಾವಿರ ವಸತಿ ಗೃಹ ನಿರ್ಮಾಣ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್‌ ಠಾಣೆಗಳನ್ನು ಹೊಸದಾಗಿ ನಿರ್ಮಿಸುವ ಗುರಿಯನ್ನು ಯಡಿಯೂರಪ್ಪ ಸರ್ಕಾರ ಹೊಂದಿದೆ. ಇದಕ್ಕಾಗಿ 25 ಕೋಟಿ ರೂ. ಹಣವನ್ನು ಕೂಡ ಮೀಸಲಿಡಲಾಗಿದೆ.

READ ALSO

ಪೊಲೀಸ್‌ ಸಿಬ್ಬಂದಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 10032 ಪೊಲೀಸ್‌ ವಸತಿ ಗೃಹ ನಿರ್ಮಿಸುವ ಗುರಿ ಹೊಂದಲಾಗಿದೆ. ಕೊಡಗು ಮತ್ತು ಹಾವೇರಿ ಜಿಲ್ಲೆಯಲ್ಲಿ ನೂತನ ಜಿಲ್ಲಾ ಪೊಲೀಸ್‌ ಸಂಕೀರ್ಣ ನಿರ್ಮಾಣಕ್ಕೆ 8 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಕರಾವಳಿ ಕಾವಲು ಪಡೆಯನ್ನು ಹಂತ ಹಂತವಾಗಿ ಬಲಪಡಿಸಲು ಎರಡು ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. 40 ಕೋಟಿ ರೂ. ವೆಚ್ಚದಲ್ಲಿ 8 ಕಾರಾಗೃಹಗಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮವಹಿಸಲಾಗಿದ್ದು 10 ಕೋಟಿ ಅನುದಾನ ನೀಡುವುದಾಗಿ ಬಜೆಟ್‌ನಲ್ಲಿ ಹೇಳಲಾಗಿದೆ.

ಕೈದಿಗಳನ್ನು ಆನ್‌ಲೈನ್‌ ಮೂಲಕ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಲು 15 ಕೋಟಿ ರೂ. ವೆಚ್ಚದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯ ಮಾಡುವುದಾಗಿ ಸರ್ಕಾರ ಹೇಳಿದೆ.