ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ವೈಭವದಿಂದ ನಡೆಯಲಿದೆ.

ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರವು ಪ್ರಾಚೀನ ಕಾಲದಲ್ಲಿ ಭಕ್ತರ ಆರಾಧನಾ ಕೇಂದ್ರವಾಗಿತ್ತು. ಸುಮಾರು 100 ವರ್ಷಗಳ ಹಿಂದೆ ಮಂದಿರ ಸಂಪೂರ್ಣ ನೆಲಸಮಗೊಂಡು ಅವಶೇಷಗಳು ಜೀರ್ಣಾವಸ್ಥೆಗೆ ತಲುಪಿದ್ದವು. ಮೂಲ ಶಿಲಾಮೂರ್ತಿಯಾದ ಶ್ರೀ ಪಾರ್ಶ್ವನಾಥ ಸ್ವಾಮಿಯ ಬಿಂಬವು ಪ್ರಸ್ತುತ ಕಡಬ ತಾಲೂಕಿನ ಕುಳವಳಿಕೆ ಬಸದಿ ಯಲ್ಲಿ ನೆಲೆಸಿದೆ ಎಂದು ತಿಳಿದುಬಂದಿದೆ.ಹಿಂದೆ ಈ ಬಸದಿಗೆ ಸಂಬಂಧಿಸಿದಂತೆ ನೂರಾರು ಜೈನ ಕುಟುಂಬಗಳು ಇದ್ದವು ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕೇವಲ ನಾಲ್ಕು ಕುಟುಂಬಗಳು ಮಾತ್ರ ಸುತ್ತಮುತ್ತ ನೆಲಸಿವೆ. ಈ ಕುಟುಂಬಗಳು ಒಟ್ಟಾಗಿ ಸೇರಿ ಬಸದಿಯನ್ನು ಪುನರ್ ನಿರ್ಮಿಸುವ ಮಹತ್ವದ ಕಾರ್ಯವನ್ನು ಕೈಗೊಂಡಿದ್ದು, ಇದೀಗ ಸಂಪೂರ್ಣ ನವೀಕರಣಗೊಂಡ ಬಸದಿ ಭಕ್ತರಿಗೆ ಸಮರ್ಪಣೆಯಾಗುತ್ತಿದೆ.

ಪರಮಪೂಜ್ಯ ಎಲಾಚಾರ್ಯ ಮುನಿಶ್ರೀ 108 ಶ್ರೀ ಪ್ರಸಂಗ ಸಾಗರ ಮಹಾರಾಜರ ಮಾರ್ಗದರ್ಶನ ಹಾಗೂ ಪವಿತ್ರ ಸಾನ್ನಿಧ್ಯದಲ್ಲಿ, ಈ ಸೀಮೆಯ ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರು, ಶ್ರೀ ಜೈನ ಮಠ ಕಾರ್ಕಳ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಗೌರವಾಧ್ಯಕ್ಷತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರ ಗೌರವ ಸಲಹೆಯೊಂದಿಗೆ, ಕರ್ನಾಟಕ ಸರ್ಕಾರದ ಅನುದಾನ ಮತ್ತು ಊರ-ಪರಊರ ಶ್ರಾವಕ-ಶ್ರಾವಕಿಯರ ಸಹಕಾರದಿಂದ ಬಸದಿ ಪುನರ್ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಫೆಬ್ರವರಿ 18ರಿಂದ 22ರವರೆಗೆ ನಡೆಯುವ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್