ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಸಂಘದ ಮುಂದಿನ ಅವಧಿಗೆ ಎಲ್ಲಾ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇದು ಬೆಳ್ತಂಗಡಿ ತಾಲೂಕಿನ ಪತ್ರಕರ್ತರ ಒಗ್ಗಟ್ಟು ಹಾಗೂ ಸಂಘಟನಾ ಬದ್ಧತೆಗೆ ಸಾಕ್ಷಿಯಾಗಿದೆ. ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹೆರಾಲ್ಡ್ ಪಿಂಟೋ, ಅಧ್ಯಕ್ಷರಾಗಿ ನಿಶಾನ್ ಬಂಗೇರ ನಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಮುಗುಳಿ, ಕೋಶಾಧಿಕಾರಿಯಾಗಿ ಸುದೀಪ್ ಸಾಲಿಯಾನ್, ಕಾರ್ಯದರ್ಶಿಯಾಗಿ ಶ್ರೇಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

ಇದಲ್ಲದೆ ಸಂಘಟನಾ ಕಾರ್ಯದರ್ಶಿಗಳಾಗಿ ಸಂದೀಪ್ ಶೆಟ್ಟಿ, ರೂಪೇಶ್ ಗೌಡ ಶಿಬಾಜೆ ಹಾಗೂ ಸುನೀಲ್ ಗಾರ್ಡಡಿ ಆಯ್ಕೆಯಾಗಿದ್ದು, ತಾಲೂಕಿನ ಮೂಲೆ ಮೂಲೆಗೂ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಆಯ್ಕೆ ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಅಧ್ಯಕ್ಷ ಈಶ್ವರ್ ವಾರಣಾಶಿ ಮಾತನಾಡಿ, “ಬೆಳ್ತಂಗಡಿ ಘಟಕವು ಸದಾ ಸಂಘಟನೆಯಲ್ಲಿ ಮಾದರಿಯಾಗಿ ಗುರುತಿಸಿಕೊಂಡಿದೆ. ನೂತನ ತಂಡವು ಪತ್ರಕರ್ತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು” ಎಂದು ಕರೆ ನೀಡಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಸಭೆಯಲ್ಲಿ ತಾಲೂಕಿನ ವಿವಿಧ ಭಾಗಗಳ ಪತ್ರಕರ್ತರು ಉಪಸ್ಥಿತರಿದ್ದು, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ