
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯು ಅಕ್ಟೋಬರ್ 17ರ ಬೆಳಗ್ಗೆ 7.45 ರಿಂದ 8.15ರೊಳಗೆ ನಡೆಯಲಿದೆ. ದಸರಾ ಆಚರಣೆ ಸಂಬಂಧ ಇಂದು ದಸರಾ ಕಾರ್ಯಕಾರಣಿ ಸಭೆ ನಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ದಸರಾ ಆಚರಣೆ ಸಂಬಂಧ ತೆಗೆದುಕೊಂಡಿರುವ ನಿರ್ಧಾರಗಳ ಬಗ್ಗೆ ಎಸ್.ಟಿ. ಸೋಮಶೇಖರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
