ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ. ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ, ಕಲ್ಮಂಜ ತಿಳಿಸಿದರು.‌ ಅವರು ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಸಾಮಾಜಿಕ ಚಿಂತನೆಗಳ ಮೂಲಕ ಸಮಾಜಮುಖಿ ಸೇವಾ ಯೋಜನೆಗಳನ್ನು ಮಾಡುವ ಉದ್ದೇಶದಿಂದ ಒಕ್ಕಲಿಗ ಸೇವಾಟ್ರಸ್ಟ್ ಕಾರ್ಯನಿರ್ವಹಿಸಲಿದೆ ಮೇ 25 ರಂದು ಬೆಳಿಗ್ಗೆ 10 ಗಂಟೆಗೆ ದೀಪ ಪ್ರಜ್ವಲನೆ ಮತ್ತು ಆಶೀರ್ವಚನವನ್ನು ಮಂಗಳೂರಿನ ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ, ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಡಿ.ಬಿ. ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮ, ಆಂಬುಲೆನ್ಸ್ ಲೋಕಾರ್ಪಣೆ, ನಮ್ಮ ಸಮಾಜದ ಆಶಕ್ತರಿಗೆ ಆರ್ಥಿಕ ನೆರವು, ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜ ಬಂಧುಗಳಿಗೆ ಸನ್ಮಾನ,ಸಮಾಜದ ನಿವೃತ್ತ ಸೈನಿಕರಿಗೆ ಗೌರವಾರ್ಪಣೆ, ಕಾರ್ಯಕ್ರಮಗಳು ನೆರವೇರಲಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ಮಾಜಿ ಅಧ್ಯಕ್ಷರು, ಚನ್ನರಾಯಪಟ್ಟಣ ಶಾಸಕರಾದ ಸಿ.ಎನ್. ಬಾಲಕೃಷ್ಣ, ಶೃಂಗೇರಿ ಶಾಸಕರಾದ ಟಿ.ಡಿ‌. ರಾಜೇಗೌಡ, ಮಾಜಿ ಸಚಿವ ಗಂಗಾಧರ ಗೌಡ, ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಸಂಜೀವ ಮಠಂದೂರು, ಉಮಾಪತಿ ಶ್ರೀನಿವಾಸ ಗೌಡ, ಸೇರಿದಂತೆ ರಾಜ್ಯದ ಅನೇಕ ಒಕ್ಕಲಿಗ ನಾಯಕರು ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.‌

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷರುಗಳಾದ ರಂಜನ್. ಜಿ. ಗೌಡ, ವಿಜಯ ಗೌಡ ವೇಣೂರು, ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಕಾರ್ಯದರ್ಶಿ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಸ್ಥಾಪಕ ಟ್ರಸ್ಡಿಗಳಾದ ನವೀನ್ ಗೌಡ ಬಿ.ಕೆ. ವಸಂತ ಮರಕಡ, ಮಚ್ಚಿನ, , ಹಾಗೂ ಟ್ರಸ್ಟಿಗಳಾದ ರಾಜೇಶ್ ಕೆ. ಗೌಡ, ದಿನೇಶ್ ಗೌಡ, ಸುಂದರ ಗೌಡ ಹತ್ಯಡ್ಕ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    You Missed

    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    • By admin
    • July 30, 2025
    • 15 views
    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    • By admin
    • July 30, 2025
    • 26 views
    ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    • By admin
    • July 29, 2025
    • 68 views
    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    • By admin
    • July 28, 2025
    • 105 views
    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    • By admin
    • July 28, 2025
    • 158 views
    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

    • By admin
    • July 27, 2025
    • 95 views
    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌