ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸಕಲೇಶಪುರ, ಆಲೂರು ಹಾಗೂ ಬೇಲೂರು ವಲಯಗಳ ಸಿ.ಎಸ್.ಸಿ ಕೇಂದ್ರಗಳಲ್ಲಿ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು.

ಪ್ರಥಮ ಬಾರಿಗೆ ನಡೆದ ಈ ಪರೀಕ್ಷೆಯಲ್ಲಿ ಒಟ್ಟು 305 ವಿದ್ಯಾರ್ಥಿಗಳು ಭಾಗವಹಿಸಿದ್ದು, ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸಿ.ಎಸ್.ಸಿ ಪ್ರಾದೇಶಿಕ ನಿರ್ದೇಶಕರಾದ ಜಯಂತ್ ಪೂಜಾರಿ ಹಾಗೂ ಹಾಸನ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಉದ್ಘಾಟಿಸಿದರು.

ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಒಲಿಂಪಿಯಾಡ್ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿ.ಎಸ್.ಸಿ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ ಅವರು, “ಒಲಿಂಪಿಯಾಡ್ ಪರೀಕ್ಷೆಯು 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ. ಇಂಗ್ಲಿಷ್, ಸಾಮಾನ್ಯ ಜ್ಞಾನ, ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡುವ ಈ ಪರೀಕ್ಷೆ, ಶಾಲಾ ಪಠ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ ವಿದ್ಯಾರ್ಥಿಗಳ ಆಳವಾದ ಜ್ಞಾನವನ್ನು ಅಳೆಯಲು ಸಹಕಾರಿಯಾಗುತ್ತದೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಆತ್ಮವಿಶ್ವಾಸ ಮತ್ತು ಸಿದ್ಧತೆಯನ್ನು ಹೆಚ್ಚಿಸುವುದರೊಂದಿಗೆ ವಿದ್ಯಾರ್ಥಿಗಳ ಆಸಕ್ತಿ ಹಾಗೂ ಪ್ರತಿಭೆಗಳನ್ನು ಗುರುತಿಸಲು ಸಹ ನೆರವಾಗುತ್ತದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಸಿ.ಎಸ್.ಸಿ ಯೋಜನಾಧಿಕಾರಿ ಸೋಮಶೇಖರ್, ಜಿಲ್ಲಾ ಎಂ.ಐ.ಎಸ್. ಯೋಜನಾಧಿಕಾರಿ ರಾಮಣ್ಣ, ಕ್ಷೇತ್ರ ಯೋಜನಾಧಿಕಾರಿ ರತ್ನಾಕರ್, ತಾಲೂಕು ನೋಡಲ್‌ಗಳಾದ ಪ್ರದೀಪ್, ಓಂಕಾರ್, ಜಯಪ್ರಸಾದ್ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ