ಬೆಳ್ತಂಗಡಿ: ಮಡಂತ್ಯಾರು ಸಮೀಪದ ಕೊಲ್ಪೆದ ಬೈಲು ಎಂಬಲ್ಲಿ ಏ.12 ರಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೊಲ್ಪದ ಬೈಲು ರಸ್ತೆಯ ಬಳಿ ಮಕ್ಕಳಿಬ್ಬರ ಜೊತೆ ಮಹಿಳೆಯರಿಬ್ಬರು ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಮಂಗಳೂರು ಕಡೆಯಿಂದ ಬಂದ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಕೊಂಡಿದ್ದಾರೆ. ಕೆಲವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ





