ಮಂಗಳೂರು: ಮಂಗಳೂರು ಬಳಿಯ ಪಚ್ಚನಾಡಿ ಕಸ ಸಂಸ್ಕರಣಾ ಘಟಕಕ್ಕೆ ರಾತ್ರಿ ವೇಳೆ ಬೆಂಕಿ ಬಿದ್ದಿದ್ದು ಸುತ್ತಮುತ್ತಲು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿದ ಬಳಿಕ ಸಂಸ್ಕರಣೆ ಮಾಡುವ ಘಟಕ ಇದಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು.
ಸುತ್ತಮುತ್ತಲಿನ ಸಾರ್ವಜನಿಕರು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಶಾರ್ಟ್ ಸರ್ಕೂಟ್ನಿಂದ ಬೆಂಕಿ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಭೇಟಿ ನೀಡಿದ್ದಾರೆ