ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಬ್ರಹ್ಮ ಕಲಶೋತ್ಸವ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 31ರಿಂದ ಫೆಬ್ರವರಿ 06ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜ.8ರಂದು ಬಿಡುಗಡೆಗೊಳಿಸಿ ಶುಭಕೋರಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ತುಕಾರಾಮ ಸಾಲಿಯನ್, ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ವಿಜಯ್ ನಿಡಿಗಲ್, ಉಪ ಸಮಿತಿಗಳ ಪ್ರಮುಖರಾದ ವೆಂಕಟರಮಣ ಶೆಟ್ಟಿ, ಕುಮಾರನಾಥ ಶೆಟ್ಟಿ, ಸುಂದರ ಗೌಡ ಬಜಿಲ,ರಜನೀಶ್. ವ್ಯವಸ್ಥಾಪನ ಸಮಿತಿ ಸದಸ್ಯರಾದ ವಸಂತ ಮೊದಲಾದವರು ಉಪಸ್ಥಿತರಿದ್ದರು.

READ ALSO