ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕ ವಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮಪಂಚಾಯತ್ ಚುನಾವಣೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸುವಂತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020ರ ಮತದಾರರ ಪಟ್ಟಿ ಪರಿಷ್ಕರಣೆ ತಯಾರಿ ನಡೆಸುವಂತೆ ಆದೇಶಿಸಿ ರಾಜ್ಯಚುನಾವಣಾ ಆಯೋಗವು ಪ್ರಕಟಣೆಯನ್ನು ಬಿಡುಗಡೆ ಗೊಳಿಸಿದೆ.