ಮುಂಬೈ : ಡಿಎಚ್ ಎಫ್ ಎಲ್ ನಿಂದ ( ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ) ಭಾರತೀಯ ರಿಸರ್ವ್ ಬ್ಯಾಂಕಿಗೆ ಒಟ್ಟು 3 ಸಾವಿರದ 688 ಕೋಟಿ ರೂಪಾಯಿ ಅನುತ್ಪಾದಕ ಆಸ್ತಿ (ಎನ್ ಪಿಎ) ಮೊತ್ತ ವಂಚನೆಯಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಆರೋಪಿಸಿದೆ.
ಮೂರು ವರ್ಷಗಳಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವರದಿ ಮಾಡಿದ ನಾಲ್ಕನೇ ಹಗರಣ ಇದು. ಬ್ಯಾಂಕೇತರ ಹಣಕಾಸು ಕಂಪನಿ ದಿವಾನ್ ಹೌಸಿಂಗ್ ಫೈನಾನ್ಸ್ ದಿವಾಳಿತನದ ಪ್ರಕ್ರಿಯೆಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 1,246.58 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.