ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, 2025-26 ನೇ ಶೈಕ್ಷಣಿಕ ವರ್ಷದ ಪ್ರಥಮ”ಪೋಷಕರ ಸಭೆ” ದಿನಾಂಕ 03-07-2025 ಶಾಲೆಯ ಸಭಾಂಗಣದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ ಬಂದಂತಹ ಎಲ್ಲ ಅತಿಥಿಗಳು ದೀಪ ಬೆಳಗುವುದರ ಮೂಲಕ ಶುಭ ಚಾಲನೆಯನ್ನು ನೀಡಿದರು.

“ಮಗುವಿನ ಬೆಳವಣಿಗೆ,ಕ್ರೀಡಾ ಚಟುವಟಿಕೆ, ದೈಹಿಕ,ಮಾನಸಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಯ ಬಗ್ಗೆ ಪೋಷಕರು ತಿಳಿದುಕೊಳ್ಳಲು ಪೋಷಕರ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು.” ಎಂದು ಸಭೆಯ ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಯುತ ಪಿ.ಶ್ರೀನಿವಾಸರಾವ್ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ಸುವರ್ಣ, ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಯುತ ದೇವಿ ಪ್ರಸಾದ್ ಬೊಳ್ಮಾ, ಎಸ್ .ಡಿ .ಎಂ .ಸಿ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ, ಉಜಿರೆ ದಂತ ಚಿಕಿತ್ಸಾಲಯದ ಡಾಕ್ಟರ್ ದೀಪಾಲಿ ಡೋಂಗ್ರೆ, ಶಾಲಾ ಪ್ರಭಾರ ಮುಖ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಹಾಗೂ ಶಾಲಾ ನಾಯಕಿ ಕುಮಾರಿ ಅನನ್ಯ ಉಪಸ್ಥಿತರಿದ್ದರು.

ದೀಪಾಲಿ ಡೋಂಗ್ರೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಶಾಲೆಯಲ್ಲಿ ನೀಡುವ ಪೌಷ್ಟಿಕ ಆಹಾರ ಸೇವನೆಯಿಂದಾಗುವ ಪ್ರಯೋಜನದ ಕುರಿತು ಪೋಷಕರಿಗೆ ಅರಿವನ್ನು ಮೂಡಿಸಿದರು. ಶಾಲಾ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಮುಂದೆ ಬರಲು ಶಾಸ್ತ್ರೀಯ ಸಂಗೀತ, ನೃತ್ಯ, ಚಿತ್ರಕಲೆ ಮತ್ತು ಕರಾಟೆ ತರಗತಿಯನ್ನು ನೀಡುವ ಕುರಿತು ಆ ಕಲೆಯಲ್ಲಿ ಪರಿಣಿತರಾದ ಗುರುಗಳು ಪೋಷಕರಿಗೆ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಶೇಕಡಾ 90% ರಷ್ಟು ಭಾಗವಹಿಸಿದ್ದು ವಿಶೇಷವಾಗಿತ್ತು.

ಹಿರಿಯ ವಿದ್ಯಾರ್ಥಿಯಾದ ಸುದರ್ಶನ್ ಕನ್ಯಾಡಿ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕಿ ಜೆಸಿಂತಾ ನೊರೊನ್ಹ ಧನ್ಯವಾದವನ್ನು ಮತ್ತು ಸಹ ಶಿಕ್ಷಕಿ ಶಾರದಾ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 18 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್