ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟ ಕಿಲಾಡಿ!

ಕಲಬುರಗಿ: ಗ್ರಾಮ ಪಂಚಾಯಿತ್ ಮೊದಲ ಹಂತದ ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ.

ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಗಾ(ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ.

READ ALSO

ಮತದಾನದ ಗೌಪ್ಯತೆ ಕಾಪಾಡುವುದು ಮತದಾರನ ಕರ್ತವ್ಯ. ಆದರೆ, ಜಂಬಗಾ (ಬಿ) ಗ್ರಾಮದ ವ್ಯಕ್ತಿ ಮತಗಟ್ಟೆಯಲ್ಲಿ ತನ್ನ ಆಯ್ಕೆಯ ಅಭ್ಯರ್ಥಿಗೆ ಮತ ಮುದ್ರೆ ಒತ್ತಿ. ಅದರ ಫೋಟೋ ತೆಗೆದಿದ್ದಾನೆ. ಅಲ್ಲದೇ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು, ಅದು ವೈರಲ್ ಆಗುತ್ತಿದೆ.

ಮತದಾನ ಕೇಂದ್ರದಲ್ಲಿ ಮೊಬೈಲ್ ಗೆ ನಿಷೇಧವಿದೆ. ಆದರೂ, ಈತ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದು ಅಚ್ಚರಿ ತರಿಸಿದೆ.