ಹಿಟ್ & ರನ್ ಪಿಕಪ್ – ಬೈಕ್ ಗೆ ಅಫಘಾತ ನಡೆಸಿ ಪರಾರಿ ಬೈಕ್ ಸವಾರರಿಬ್ಬರ ದುರ್ಮರಣ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ಪಿಕಪ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ವರದಿಯಾಗಿದೆ.

ಪಿಕಪ್ ವಾಹನದ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಅಪಘಾತ ನಡೆಸಿ ಪರಾರಿಯಾಗಿದ್ದು, ಬೈಕ್ ನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತರನ್ನು ಸ್ಥಳೀಯ ಗ್ರಾಮದವರೆಂದು ಗುರುತಿಸಲಾಗಿದೆ.

READ ALSO

ಉಪ್ಪಿನಂಗಡಿಯಿಂದ ಕಲ್ಲೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಪಿಕಾಪ್ ಬೈಕ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವೆಸಗಿದ ಪಿಕಾಪ್ ನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಇದಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.